ಪಿಯು ಪರೀಕ್ಷೆ: ಮೊದಲ ದಿನ ಸರಾಗ
Team Udayavani, Mar 2, 2019, 3:05 AM IST
ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಮೊದಲ ದಿನ ಪರೀಕ್ಷಾ
ಅಕ್ರಮದ ಆರೋಪದಡಿ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಉಳಿದಂತೆ ಯಾವುದೇ ರೀತಿಯ ಗೊಂದಲವಿಲ್ಲದೆ ಪರೀಕ್ಷೆ ನಡೆದಿದೆ. ಶುಕ್ರವಾರ ನಡೆದ ಅರ್ಥಶಾಸ್ತ್ರ ಪರೀಕ್ಷೆಯಲ್ಲಿ ಶೇ.95ರಷ್ಟು ಹಾಗೂ ಭೌತಶಾಸ್ತ್ರ ಪರೀಕ್ಷೆಯಲ್ಲಿ ಶೇ.98ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು.ಭೌತ ಶಾಸ್ತ್ರ ಪರೀಕ್ಷೆಗೆ 1,97,323 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 1,92,669 ವಿದ್ಯಾರ್ಥಿಗಳು ಹಾಜರಾ ಗಿದ್ದು, 4,654ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಅರ್ಥಶಾಸ್ತ್ರ ಪರೀಕ್ಷೆಗೆ 3,77,385 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 21,089 ವಿದ್ಯಾರ್ಥಿ ಗಳು ಗೈರಾಗಿದ್ದು, 3,56,295 ವಿದ್ಯಾರ್ಥಿ ಗಳು ಪರೀಕ್ಷೆ ಬರೆದಿದ್ದಾರೆ. ಮಾಗಡಿ ತಾಲೂಕಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಪ್ರಕರಣ ದಾಖಲಾಗಿದೆಎಂದು ಪಿಯು ಇಲಾಖೆ ನಿರ್ದೇಶಕ ಡಾ.ಪಿ.ಸಿ.ಜಾಫರ್ತಿಳಿಸಿದ್ದಾರೆ. ಬೆಂಗಳೂರಿನ ಒಂದು ಪಿಯು ಕಾಲೇಜಿ ನಲ್ಲಿ ವಿದ್ಯಾರ್ಥಿಯ ಹಾಜರಾತಿ ಕೊರತೆ ಇದೆ ಎಂಬ ಕಾರಣಕ್ಕೆ ಪ್ರವೇಶ ಪತ್ರ ನೀಡದೇ
ಇರುವುದರಿಂದ ಗೊಂದಲದ ವಾತಾ ವರಣ ನಿರ್ಮಾಣವಾಗಿತ್ತು. ವಿದ್ಯಾರ್ಥಿ,
ಪ್ರಾಂಶುಪಾಲರ ನಡುವೆ ಮಾತಿನ ಚಕಮಕಿ ನಡೆಯಿತು. ಅಂತಿಮ ವಾಗಿ
ಪರೀಕ್ಷೆಗೆ ಕೂರಲು ಅವಕಾಶ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.