ಪಿಯು ಪರೀಕ್ಷೆ: ರಾಜ್ಯಾದ್ಯಂತ ನಾಲ್ಕು ಸೇವಾ ಕೇಂದ್ರ
Team Udayavani, Jan 18, 2020, 3:05 AM IST
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಿರು ನಿಯಂತ್ರಣ ಘಟಕ ಹಾಗೂ ಪರೀಕ್ಷಾ ಕೇಂದ್ರಗಳ ಮಾಹಿತಿ ತಿಳಿಯಲು ರಾಜ್ಯಾದ್ಯಂತ ನಾಲ್ಕು ಸೇವಾ ಕೇಂದ್ರ ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದ್ದಾರೆ.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಸಂಬಂಧ ಪಿಯು ಇಲಾಖೆ ನಿರ್ದೇಶಕರು ಮತ್ತು ಜಿಲ್ಲಾ ಉಪನಿರ್ದೇಶಕ ರೊಂದಿಗೆ ನಡೆಸಿದ ಸಭೆಯ ಬಳಿಕ ಮಾತನಾಡಿ, ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ಚಟುವಟಿಕೆಗಳ ನಿರ್ವಹಣೆಗಾಗಿ ಬೆಂಗಳೂರಿನ ಮಲ್ಲೇಶ್ವರದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ಇದೆ.
ಯಾವುದೇ ರೀತಿಯಲ್ಲೂ ಲೋಪದೋಷವಾಗಂತೆ ಈ ವರ್ಷದಿಂದ ಮತ್ತಷ್ಟು ಜಾಗೃತಿ ವಹಿಸಲು ಆಯಾ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿಯೂ ಕಿರು ನಿಯಂತ್ರಣ ಘಟಕ ತೆರೆಯಲಾಗುತ್ತಿದೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಫೆಬ್ರವರಿಯಲ್ಲಿ ಜಿಲ್ಲಾಧಿಕಾರಿಗಳು, ಖಜಾನಾಧಿಕಾರಿಗಳು, ಪೊಲೀಸ್ ಇಲಾಖೆಯನ್ನು ಒಳಗೊಂಡ ಅಧಿಕಾರಿಗಳ ಸಭೆ ನಡೆಸುವುದಾಗಿ ತಿಳಿಸಿದರು.
2020ನೇ ಸಾಲಿನ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಜ.25ರಿಂದ ಫೆ.10ರ ವರೆಗೆ ನಡೆಯಲಿದೆ. 2,46,772 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅಭ್ಯರ್ಥಿ ಪಟ್ಟಿ, ಅಂಕ ಪಟ್ಟಿ ಹಾಗೂ ಉತ್ತರ ಪತ್ರಿಕೆಗಳನ್ನು ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ಕೂಡಲೇ ರವಾನಿಸಲು ಸೂಚನೆ ನೀಡಿದರು. ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನೇರವಾಗಿ ಆನ್‌ಲೈನ್ ಮೂಲಕ ಕೇಂದ್ರಕ್ಕೆ ರವಾನಿಸಲು ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.