ಡಿಜಿ ಲಾಕರ್ನಲ್ಲಿ ಪಿಯು ಅಂಕಪಟ್ಟಿ
Team Udayavani, Jun 17, 2019, 3:00 AM IST
ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಮೂಲ ಪ್ರತಿಯನ್ನು ಆನ್ಲೈನ್ನಲ್ಲೇ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಡಿಜಿಟಲ್ ಲಾಕರ್ ಬಳಸಿಕೊಂಡು ಆನ್ಲೈನ್ ಮೂಲಕವೇ ಅಂಕಪಟ್ಟಿ ಪಡೆಯಬಹುದಾದ ವ್ಯವಸ್ಥೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಕಲ್ಪಿಸಿದೆ.
ಕೇಂದ್ರ ಸರ್ಕಾರದ ಡಿಜಿಲಾಕರ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಅಂಕಪಟ್ಟಿಯನ್ನು ಆನ್ಲೈನ್ನಲ್ಲಿ ನೀಡಲಾಗುವುದು. ಎಲ್ಲ ರೀತಿಯ ಭದ್ರತೆಯನ್ನು ಒದಗಿಸಲಾಗಿದೆ. ಇಲ್ಲಿ ನಕಲು ಮಾಡಲು ಸಾಧ್ಯವಿಲ್ಲ ಎಂದು ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
2018ರ ಮಾರ್ಚ್ನಿಂದ 2019ರ ಮಾರ್ಚ್ ಅವಧಿಯಲ್ಲಿ ದ್ವಿತೀಯ ಪಿಯುಸಿ ಪೂರೈಸಿದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿಲಾಕರ್ಗೆ ಅಳವಡಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆ ಬಳಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಲಾಗಿನ್ ಮಾಡಲು ನೋಂದಾಯಿತ ಮೊಬೈಲ್ ಸಂಖ್ಯೆ ಅಳವಡಿಸಬೇಕು.
ಮೊಬೈಲ್ಗೆ ಒನ್ ಟೈಮ್ ಪಾಸ್ವರ್ಡ್(ಒಟಿಪಿ) ಬರುತ್ತದೆ. ನಂತರ ವಿದ್ಯಾರ್ಥಿ ತನ್ನ ಯೂಸರ್ ನೇಮ್ ಮತ್ತು ಪಾಸ್ವರ್ಡ್ ಬಳಸಿ ಡಿಜಿಲಾಕರ್ನಿಂದ ಅಂಕಪಟ್ಟಿ ಪಡೆಯಬಹುದು. ಆಧಾರ್ ಸಂಖ್ಯೆಯನ್ನು ಡಿಜಿಲಾಕರ್ನೊಂದಿಗೆ ಜೋಡಿಸಿದ ನಂತರವಷ್ಟೇ ಅಂಕಪಟ್ಟಿ ಸಿಗಲಿದೆ.
ಒಬ್ಬರ ಅಂಕಪಟ್ಟಿಯನ್ನು ಇನ್ನೊಬ್ಬರು ಡೌನ್ಲೋಡ್ ಮಾಡಿಕೊಳ್ಳದಂತೆ ಹಾಗೂ ನಕಲು ಮಾಡಲು ಸಾಧ್ಯವಾಗದಂತೆ ಸುರಕ್ಷತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿ ತನ್ನ ಯೂಸರ್ ನೇಮ್ ಮತ್ತು ಪಾಸ್ವರ್ಡ್ ಹಾಕಿದರೆ ಮಾತ್ರ ಡಿಜಿಲಾಕರ್ನಲ್ಲಿರುವ ಅಂಕಪಟ್ಟಿ ಸಿಗುತ್ತದೆ. ಮಾಹಿತಿಗಾಗಿ ಪಿಯು ಇಲಾಖೆಯ ವೆಬ್ಸೈಟ್ http://pue.kar.nic.in/ ಅಥವಾ https://digilocker.gov.in/ ನೋಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.