ಮೇ 23ರಿಂದ ಪಿಯು ಪೂರಕ ಪರೀಕ್ಷೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ
Team Udayavani, May 10, 2023, 7:25 AM IST
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023ನೇ ಸಾಲಿನ ದ್ವಿತೀಯ ಪಿಯು ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 23ರಿಂದ ಜೂ. 3ರ ವರೆಗೆ ನಡೆಯಲಿದೆ.
ಈ ಮೊದಲು ಮೇ 22ರಿಂದ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದರೆ ಮೇ 22ರಂದು ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಸಿಇಟಿ ಕನ್ನಡ ಭಾಷಾ ಪರೀಕ್ಷೆ ನಿಗದಿಯಾಗಿರುವುದರಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.
ಕೆಲವು ಪರೀಕ್ಷೆಗಳು ಬೆಳಗ್ಗೆ 10.15ರಿಂದ 1.30 ಹಾಗೂ ಮತ್ತೆ ಕೆಲವು ಪರೀಕ್ಷೆ ಅಪರಾಹ್ನ 2.15ರಿಂದ 5.30ರ ವರೆಗೆ ನಡೆಯಲಿದೆ.
ಮೇ 23ರಂದು ಕನ್ನಡ, ಅರೇಬಿಕ್, ಮೇ 24-ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ, ಮೇ 25-ಇಂಗ್ಲಿಷ್ (ಅಪರಾಹ್ನ- ಐಟಿ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್), ಮೇ 26-ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ, ಮೇ 29-ಹಿಂದಿ (ಅಪರಾಹ್ನ-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್), ಮೇ 28-ರಜೆ, ಮೇ 29-ಭೂಗೋಳಶಾಸ್ತ್ರ, ಮನಶಾÏಸ್ತ್ರ, ಭೌತಶಾಸ್ತ್ರ, ಮೇ30-ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ಮೇ 31- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಜೂ. 1-ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ, ಜೂ.2-ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ, ಜೂ-3ಅರ್ಥಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆಗಳು ನಡೆಯ ಲಿದೆ ಎಂದು ಮಂಡಳಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.