ಮಂಗಳೂರು ಪಬ್ ದಾಳಿ: ಮುತಾಲಿಕ್ ಸೇರಿ ಆರೋಪಿಗಳೆಲ್ಲರೂ ಖುಲಾಸೆ
Team Udayavani, Mar 12, 2018, 5:08 PM IST
ಮಂಗಳೂರು: ರಾಷ್ಟ್ರ ಮಟ್ಟದಲ್ಲಿ ಭಾರಿ ಸುದ್ದಿಯಾಗಿದ್ದ ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆರೋಪಿಗಳನ್ನು ನಗರದ 3ನೇ ಜೆಎಂಎಫ್ಸಿ ನ್ಯಾಯಾಲಯ ಖುಲಾಸೆಗೊಳಿಸಿ ಸೋಮವಾರ ತೀರ್ಪು ನೀಡಿದೆ.
ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್,ಸುಭಾಷ್ ಪಡೀಲ್, ಪ್ರಸಾದ್ ಅತ್ತಾವರ ಸೇರಿ 26 ಮಂದಿ ಆರೋಪಿಗಳನ್ನು ನ್ಯಾಯಾಲಯ ಸುಧೀರ್ಘ ವಿಚಾರಣೆ ನಡೆಸಿದ ಬಳಿಕ ಸೂಕ್ತ ಸಾಕ್ಷಾಧಾರಗಳಿಲ್ಲದ ಕಾರಣಕ್ಕಾಗಿ ಆರೋಪ ಮುಕ್ತ ಗೊಳಿಸಿದೆ. ಆರೋಪಿಗಳ ಪರ ವಕೀಲರಾದ ಆಶಾ ನಾಯಕ್ ಮತ್ತು ವಿನೋದ್ ಅವರು ವಾದ ಮಂಡಿಸಿದ್ದರು.
ತೀರ್ಪು ಸಂತಸ ತಂದಿದೆ, ನ್ಯಾಯಕ್ಕೆ ಜಯವಾಗಿದೆ ಎಂದು ಪ್ರಮೋದ್ ಮುತಾಲಿಕ್ ಅವರು ಪ್ರತಿಕ್ರಿಯಿಸಿದ್ದಾರೆ. ತೀರ್ಪು ಪ್ರಕಟಿಸುವ ವೇಳೆ ಮುತಾಲಿಕ್ ಅವರು ಕೋರ್ಟ್ನಲ್ಲಿ ಹಾಜರಿದ್ದರು.
2009 ರಲ್ಲಿ ಬಲ್ಮಠದ ಆಮ್ನೇಷಿಯಾ ಪಬ್ ಮೇಲೆ ಶ್ರೀರಾಮ ಸೇನೆಯ ಕಾರ್ಯಕರ್ತರು ದಾಳಿ ನಡೆಸಿ ಅಲ್ಲಿದ್ದವರಿಗೆ ಥಳಿಸಿದ್ದರು. ಈ ವಿಚಾರ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.