7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಇಂದು ನಿರ್ಧಾರ
Team Udayavani, Dec 11, 2019, 3:00 AM IST
ಬೆಂಗಳೂರು: ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆಯಿಲ್ಲ. ಆದರೂ, ಈ ಬಾರಿಯಿಂದಲೇ ಪಬ್ಲಿಕ್ ಪರೀಕ್ಷೆ ನಡೆಸಿದರೆ ಶಿಕ್ಷಣ ಇಲಾಖೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದೇ ದೊಡ್ಡ ಸವಾಲಾಗಲಿದೆ.ಪಬ್ಲಿಕ್ ಪರೀಕ್ಷೆಗೆ ಬೇಕಾದ ಸಿದ್ಧತೆಯನ್ನೇ ಇನ್ನು ಆರಂಭಿಸದಿರುವುದು ಒಂದೆಡೆಯಾದರೆ, ಪಬ್ಲಿಕ್ ಪರೀಕ್ಷೆ ನಡೆಸುವುದು ಮಕ್ಕಳ ಹಕ್ಕಿನ ಉಲ್ಲಂಘನೆ.
ಇದಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೀಡಿರುವ ನೋಟಿಸ್‌ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸರ್ಕಾರದ ಮಟ್ಟದಲ್ಲಿ ಇನ್ನೂ ಸ್ಪಷ್ಟತೆ ಇಲ್ಲದ ಕಾರಣ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಡಿ.11ರಂದು ನಗರದ ನೃಪತುಂಗ ರಸ್ತೆಯ ಶಿಕ್ಷಕರ ಸದನದಲ್ಲಿ ಸಭೆ ಆಯೋಜಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು ಶಿಕ್ಷಣ ಇಲಾಖೆ ಉನ್ನತ ಅಧಿಕಾರಿಗಳು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಇಲಾಖೆ ಉನ್ನತ ಮೂಲಗಳು ಖಚಿತಪಡಿಸಿವೆ.
ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತು ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸ್ಪಷ್ಟನೆ ಕೋರಿ ನವೆಂಬರ್‌ನಲ್ಲಿ ಇಲಾಖೆಗೆ ನೋಟಿಸ್ ನೀಡಿತ್ತು. ಇಲಾಖೆಯಿಂದ ಯಾವುದೇ ಸ್ಪಷ್ಟನೆ ಆಯೋಗಕ್ಕೆ ಬಾರದಿದ್ದರಿಂದ ಮತ್ತೂಮ್ಮೆ ನೋಟಿಸ್ ಜಾರಿಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.11ರಂದು ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.