ಶೀರೂರು ಶ್ರೀ ಅಂತಿಮ ದರ್ಶನಕ್ಕೆ ಜನಸಾಗರ; ಮೂಲ ಮಠದಲ್ಲಿ ವೃಂದಾವನ
Team Udayavani, Jul 19, 2018, 6:31 PM IST
ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಾಧೀಶ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಯ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಪಾರ ಜನಸಾಗರವೇ ಹರಿದು ಬಂದಿತ್ತು. ಇದೀಗ ಕೃಷ್ಣಮಠದಿಂದ ಪುಷ್ಪಾಲಂಕೃತ ಬುಟ್ಟಿಯಲ್ಲಿ ಶೀರೂರು ಶ್ರೀಗಳ ಪಾರ್ಥಿವ ಶರೀರ ಇಟ್ಟು ಮೆರವಣಿಗೆ ಮೂಲಕ ಮೂಲ ಶೀರೂರು ಮಠಕ್ಕೆ ಕೊಂಡೊಯ್ಯಲಾಗುತ್ತಿದೆ.
ಇದನ್ನೂ ಓದಿ: ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಪಾದರು ವಿಧಿವಶ
ಉಡುಪಿಯಿಂದ 21 ಕಿಲೋ ಮೀಟರ್ ದೂರದಲ್ಲಿರುವ ಶೀರೂರು ಮೂಲ ಮಠದತ್ತ ಮೆರವಣಿಗೆ ಮೂಲಕ ಪಾರ್ಥಿವ ಶರೀರ ಕೊಂಡೊಯ್ಯುತ್ತಿದ್ದಾರೆ. ಉಡುಪಿಯ ಕೃಷ್ಣ ಮಠದಲ್ಲಿ ಪೂಜೆ ಬಳಿಕ ಪಾರ್ಥಿವ ಶರೀರ ರವಾನೆ. ಹಿರಿಯಡ್ಕದಲ್ಲಿರುವ ಮೂಲ ಮಠದ ಸ್ವರ್ಣಾ ನದಿ ತಟದಲ್ಲಿ ಅಂತಿಮ ಕ್ರಿಯೆ ನೆರವೇರಲಿದೆ.
ಶೀರೂರು ಮೂಲ ಮಠದ ಆವರಣದಲ್ಲಿಯೇ ಶಾಸ್ತ್ರೋಕ್ತವಾಗಿ ಶೀರೂರು ಶ್ರೀಗಳ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿ ವಿಧಾನ ನೆರವೇರಿಸುವ ಮೂಲಕ ವೃಂದಾವನಸ್ಥರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಷ್ಟಮಠಗಳ ಪೈಕಿ ಪಲಿಮಾರು ಶ್ರೀಗಳು ಮಾತ್ರ ಶೀರೂರು ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಉಳಿದ ಶ್ರೀಗಳು ಯಾರೂ ಅಂತಿಮ ದರ್ಶನ ಪಡೆದಿಲ್ಲ.
ಶೀರೂರು ಮೂಲ ಮಠದಲ್ಲಿ ಬಿಗಿ ಪೊಲೀಸ್ ಭದ್ರತೆ:
ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಶೀರೂರು ಮೂಲ ಮಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೇ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶೀರೂರು ಮಠ ಪೊಲೀಸರ ವಶಕ್ಕೆ:
ಮೂರು ದಿನಗಳ ಕಾಲ ಶೀರೂರು ಮಠ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಪೊಲೀಸರು ಶೀರೂರು ಮೂಲ ಮಠದಲ್ಲಿ ಪರಿಶೀಲನೆ, ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.