ಪಿಯು ಇಂಗ್ಲಿಷ್ ಪರೀಕ್ಷೆ : ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಬಳಕೆ
Team Udayavani, Jun 6, 2020, 7:03 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂನ್ 18ರಂದು ನಡೆಯಲಿದ್ದು, ಕೊಠಡಿ ಮೇಲ್ವಿಚಾರಕರ ಕೊರತೆ ಕಂಡು ಬಂದರೆ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸೇವೆ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ. ಈಗಾಗಲೇ ಪೂರ್ಣಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ. ಹಾಗೆಯೇ ಜೂನ್ 18ರಂದು ನಡೆಯಲಿರುವ ಇಂಗ್ಲಿಷ್ ಪರೀಕ್ಷೆಗೂ ಸಿದ್ಧತೆ ಆರಂಭವಾಗಿದೆ.
ಪರೀಕ್ಷಾ ಭದ್ರತಾ ದೃಷ್ಟಿಯಿಂದ ಕೊಠಡಿ ಮೇಲ್ವಿಚಾರಕರ ಕೊರತೆ ಕಂಡುಬಂದಲ್ಲಿ, ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕ ರನ್ನು ನಿಯೋಜಿಸಿಕೊಳ್ಳುವಂತೆ ಪರೀಕ್ಷೆ ಕೇಂದ್ರಗಳ ಅಧೀಕ್ಷಕರಿಗೆ ಆಯಾ ಜಿಲ್ಲೆಗಳ ಪಿಯು ಇಲಾಖೆ ಉಪ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈಗಾಗಲೇ ಪಿಯುಸಿ ಮೌಲ್ಯ ಮಾಪನ ಕಾರ್ಯದಲ್ಲಿರುವ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಇಲಾಖೆಯ ಮುಂದಿನ ಆದೇಶದವರೆಗೂ ಅದೇ ಕಾರ್ಯದಲ್ಲಿ ಮುಂದುವರಿಯ ಬೇಕು. ಮೌಲ್ಯಮಾಪನ ಕಾರ್ಯದಲ್ಲಿರುವ ಸಿಬಂದಿ ವರ್ಗ ಪರೀಕ್ಷಾ ಸಿದ್ಧತೆಯ ಬಗ್ಗೆಯೂ ಗಮನ ಹರಿಸಬೇಕು ಎಂದು ನಿರ್ದೇಶಿಸಿದೆ.
ವಿಕೇಂದ್ರೀಕರಣಕ್ಕೆ ಒತ್ತಾಯ
ಮೌಲ್ಯಮಾಪನವನ್ನು ಜಿಲ್ಲಾ ಕೇಂದ್ರಗಳಿಗೆ ವಿಕೇಂದ್ರೀಕರಣ ಮಾಡದ ಹೊರತು ವಿಜ್ಞಾನ ಮೌಲ್ಯ ಮಾಪನ ಮಾಡುವುದಿಲ್ಲ ಎಂದು ಪಿಯು ಉಪನ್ಯಾಸಕರ ಸಂಘವು ತನ್ನ ನಿಲುವು ಬದಲಿಸದ ಹಿನ್ನೆಲೆಯಲ್ಲಿ ಶುಕ್ರವಾರ ಆರಂಭವಾದ ಮೌಲ್ಯ ಮಾಪನಕ್ಕೆ ಕೇಲವೇ ಕೆಲವು ಮೌಲ್ಯ ಮಾಪಕರು ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.
ರಾಜ್ಯದ ಎಂಟು ಜಿಲ್ಲೆಗಳ 34 ಕೇಂದ್ರಗಳಲ್ಲಿ ನಡೆಯುತ್ತಿರುವ ಕಲಾ ಮತ್ತು ವಾಣಿಜ್ಯ ವಿಷಯಗಳ ಮೌಲ್ಯಮಾಪನ ಬಹುತೇಕ ಮುಗಿ ಯುವ ಹಂತಕ್ಕೆ ಬಂದಿದೆ. ಆದರೆ, ರಸಾಯನಶಾಸ್ತ್ರ, ಜೀವಶಾಸ್ತ್ರ, ಭೌತ ಶಾಸ್ತ್ರ ಮತ್ತು ಗಣಿತ ವಿಷಯಗಳ ಮೌಲ್ಯಮಾಪನವನ್ನು ಬೆಂಗಳೂರಿನ ಎಂಟು ಕೇಂದ್ರಗಳಲ್ಲಿ ಮಾತ್ರ ಮಾಡಲಾಗುತ್ತಿದೆ. ರಾಜ್ಯದ ವಿವಿಧೆಡೆ ಯಿಂದ ಬೆಂಗಳೂರಿಗೆ ಬಂದು ಮೌಲ್ಯಮಾಪನಕ್ಕೆ ಹಾಜರಾಗಲು ಕಷ್ಟವಾಗಲಿದೆ. ವಿಕೇಂದ್ರೀಕರಣ ಗೊಳಿಸಬೇಕು ಎಂದು ಪಿಯು ಕಾಲೇಜಿನ ಉಪನ್ಯಾಸಕರು ಹಾಗೂ ಪ್ರಾಚಾರ್ಯರ ಸಂಘ ಕೋರಿತ್ತು. ಆದರೂ, ಇಲಾಖೆ ಮನ್ನಣೆ ನೀಡದೆ ಇರುವುದರಿಂದ ಬಹಿಷ್ಕಾರದ ಎಚ್ಚರಿಕೆಯನ್ನು ಸಂಘ ನೀಡಿತ್ತು.
ವಿಜ್ಞಾನ ಮೌಲ್ಯಮಾಪನ ಆರಂಭ
ಬೆಂಗಳೂರಿನ ವಿವಿಧ ಎಂಟು ಮೌಲ್ಯಮಾಪನ ಕೇಂದ್ರಗಳಲ್ಲಿ ಶುಕ್ರವಾರ ಆರಂಭವಾದ ದ್ವಿತೀಯ ಪಿಯು ವಿಜ್ಞಾನ ವಿಷಯಗಳ ಮೌಲ್ಯ ಮಾಪನಕ್ಕೆ ಕೇವಲ ಬೆರಳೆಣಿಕೆ ಸಂಖ್ಯೆಯಲ್ಲಿ ಮೌಲ್ಯ ಮಾಪಕರು ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.