ಪಿಯುಸಿ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Team Udayavani, Oct 3, 2019, 3:00 AM IST
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು 2020ರ ಮಾರ್ಚ್‌ನಲ್ಲಿ ನಡೆಸಲು ನಿರ್ಧರಿಸಿದ್ದು, ಇದರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾ.4ರಿಂದ 19ರ ವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದರೆ ಅ.31ರೊಳಗೆ ಜಂಟಿ ನಿರ್ದೇಶಕರಿಗೆ (ಪರೀಕ್ಷೆ) ಕಳುಹಿಸಬಹುದು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಪಿಯು ಇಲಾಖೆ ತಿಳಿಸಿದೆ.
ವೇಳಾಪಟ್ಟಿ: ಮಾ.4- ಇತಿಹಾಸ, ಭೌತಶಾಸ್ತ್ರ, ಮೂಲಗಣಿತ, ಮಾ.5- ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, ಮಾ.6- ಉರ್ದು, ಸಂಸ್ಕೃತ., ಮಾ.7- ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ., ಮಾ.9- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ., ಮಾ.10- ಎನ್‌ಎಸ್‌ಕ್ಯೂಎಫ್ ಪರೀಕ್ಷೆ, ಮಾ.11- ರಾಜ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ, ಮಾ.12- ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ, ಮಾ.13- ಭೂಗೋಳಶಾಸ್ತ್ರ, ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ, ಮಾ.14- ಮನ:ಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಾ.16- ಇತಿಹಾಸ, ಜೀವಶಾಸ್ತ್ರ, ಮಾ.17- ಹಿಂದಿ, ಮಾ.18 – ಕನ್ನಡ, ಮಾ.19- ಇಂಗ್ಲಿಷ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.