ದ್ವಿತೀಯ ಪಿಯು ಮೌಲ್ಯಮಾಪಕರಿಗೆ ಶೇ.20ರಷ್ಟು ಸಂಭಾವನೆ ಹೆಚ್ಚಳ
Team Udayavani, May 31, 2022, 6:09 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯದಲ್ಲಿ ಮತ್ತು ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯದಲ್ಲಿ ಹಾಜರಾಗುವ ಸಿಬ್ಬಂದಿಗೆ ಶೇ.20ರಷ್ಟು ಸಂಭಾವನೆ ಹೆಚ್ಚಳ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.
ಈ ಸಂಭಾವನೆಯು ಮುಂದಿನ ಮೂರು ವರ್ಷಗಳವರೆಗೆ ಜಾರಿಯಲ್ಲಿರಲಿದೆ. ಸಂಭಾವನೆ ಪರಿಷ್ಕರಣೆಗೆ ಷರತ್ತುಗಳನ್ನು ಸಹ ವಿಧಿಸಿದೆ. ಯುಜಿಸಿ ವೇತನ ಪಡೆಯುವ ಉಪನ್ಯಾಸಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದರೆ ಪ್ರಯಾಣ ಭತ್ಯೆ ಮತ್ತು ದಿನಭತ್ಯೆಯನ್ನು ಮಾತ್ರ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳನ್ವಯ ನೀಡಬೇಕು. ಇವರಿಗೆ ಬೇರೆ ಯಾವುದೇ ಸಂಭಾವನೆ ನೀಡುವಂತಿಲ್ಲ.
ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಉಪನ್ಯಾಸಕರು ಎಸಗುವ ತಪ್ಪುಗಳಿಗೆ ವಿಧಿಸುವ ದಂಡವನ್ನು ಸೂಕ್ತವಾದ ನಿಯಮಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು. ಇದಕ್ಕೆ ತಗಲುವ ವೆಚ್ಚವನ್ನು ಯೋಜನೇತರ ಅಡಿಯಲ್ಲಿ ಪ್ರಸ್ತುತ ವರ್ಷದಲ್ಲಿ ಇಲಾಖೆಗೆ ಒದಗಿಸಿರುವ ಅನುದಾನದ ಮಿತಿಯಲ್ಲಿಯೇ ಭರಿಸಬೇಕು.
ಮೊದಲು 3 ಗಂಟೆಯ ಅವಧಿಯ ಕನ್ನಡ ಆವೃತ್ತಿಯಲ್ಲದ ಪ್ರಶ್ನೆ ಪತ್ರಿಕೆ ತಯಾರಿಸಲು ಪ್ರತಿಯೊಬ್ಬರಿಗೆ 2082 ರೂ.ನಿಗದಿ ಪಡಿಸಿತ್ತು. ಇದು 2,498 ರೂ.ಗಳಿಗೆ ಹೆಚ್ಚಳವಾಗಿದೆ. ವಾಹನ ಚಾಲಕರಿಗೆ 696 ರೂ. ನೀಡಲಾಗುತ್ತಿತ್ತು. ಇದರ ಪ್ರಮಾಣ 1253 ರೂ.ಗೆ ಏರಿಕೆಯಾಗಿದೆ.
ಇದನ್ನೂ ಓದಿ:ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ
ಈ ರೀತಿ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸಿರುವ ಹಾಗೂ ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗಿರುವ ಸಿಬ್ಬಂದಿಗೆ ಶೇ.20 ಹೆಚ್ಚಳ ಮಾಡಲಾಗುತ್ತದೆ ಎಂದು ಪಿಯು ಇಲಾಖೆ ಅಧೀನ ಕಾರ್ಯದರ್ಶಿ ಪದ್ಮಿನಿ ಎಸ್.ಎಸ್. ಆದೇಶ ಹೊರಡಿಸಿದ್ದಾರೆ. ಸಂಭಾವನೆ ಹೆಚ್ಚಳ ಮಾಡಿರುವುದಕ್ಕೆ ಪಿಯು ಉಪನ್ಯಾಸಕರ ಸಂಘ ಅಧ್ಯಕ್ಷ ಎ.ಎಚ್. ನಿಂಗೇಗೌಡ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.