ನವೆಂಬರ್/ಡಿಸೆಂಬರ್ ನಲ್ಲಿ ನಭಕ್ಕೆ ನೆಗೆಯಲಿರುವ ‘ಪುನೀತ್’ ಉಪಗ್ರಹ
ವೈಜ್ಞಾನಿಕ ಅರಿವು ಮೂಡಿಸಲು ಹೈಸ್ಕೂಲ್, ಪಿಯುಸಿ ಮಕ್ಕಳಿಗೆ ಸ್ಪರ್ಧೆ
Team Udayavani, Aug 25, 2022, 7:47 PM IST
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಹೇಳಿದ್ದಾರೆ.
ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, “ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುವುದು” ಎಂದರು.
ಸ್ಪರ್ಧೆಯ ಭಾಗವಾಗಿ ಪ್ರೌಢಶಾಲಾ ಮಕ್ಕಳಿಗೆ ಆನ್‌ಲೈನ್ ರಸಪ್ರಶ್ನೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಎಲ್ಲಾ 31 ಜಿಲ್ಲೆಗಳ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ಕೊಡಲಾಗಿದೆ ಎಂದು ಅವರು ತಿಳಿಸಿದರು.
ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ಘೋಷಿಸಿದ್ದರು. ಈ ಪೈಕಿ, ಬೆಂಗಳೂರು ವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ‘ಕೆಜಿಎಸ್3ಸ್ಯಾಟ್’ ಉಪಗ್ರಹವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದು, ಮಲ್ಲೇಶ್ವರಂನಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಇವರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ದಿವಂಗತ ನಟ ಪುನೀತ್ ಅವರ ಸ್ಮರಣಾರ್ಥ ಈ ಉಪಗ್ರಹಕ್ಕೆ ಅವರ ಹೆಸರನ್ನಿಡಲಾಗಿದೆ. ಪ್ರಧಾನಿಯವರ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ” ಎಂದು ಅವರು ವಿವರಿಸಿದರು.
ಇದನ್ನೂ ಓದಿ: ಖಾಸಗಿತನ ನೀತಿಗಳಿಗೆ ಸಂಬಂಧಿಸಿದ ಪ್ರಕರಣ: ವಾಟ್ಸ್‌ಆ್ಯಪ್, ಫೇಸ್‌ಬುಕ್ ಅರ್ಜಿ ವಜಾ
ವಿದ್ಯಾರ್ಥಿಗಳು ಕೇವಲ ಉಪಗ್ರಹ ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಂಡರೆ ಸಾಲದು. ಬದಲಿಗೆ ಬಾಹ್ಯಾಕಾಶ, ಖಗೋಳ ವಿಜ್ಞಾನ, ಅಂತರಿಕ್ಷ ಇತ್ಯಾದಿಗಳ ಬಗ್ಗೆ ತಿಳಿದುಕೊಂಡು, ಸಂಭ್ರಮಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಹೀಗಾಗಿ ಸ್ಪರ್ಧೆ ಮತ್ತು ವಿಜೇತರಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ನುಡಿದರು.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೇರಿದಂತೆ ಇತರ ಹಿರಿಯ ವಿಜ್ಞಾನಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.