ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ : ಸಿಎಂ
ನಮ್ಮ ದೇಶದ ಸಂಸ್ಕೃತಿ, ಜೀವ ಉಳಿಸುವುದೇ ಹೊರತು ವಧೆ ಮಾಡುವುದಲ್ಲ
Team Udayavani, May 7, 2022, 5:15 PM IST
ಬೆಂಗಳೂರು : ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಶನಿವಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದರು.
ಈ ಹಿಂದೆ ನಾನು ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು 11 ಗೋವುಗಳನ್ನು ದತ್ತು ತೆಗೆದುಕೊಂಡು ಆಚರಿಸಿಕೊಂಡಿರುವುದನ್ನು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸ್ಮರಿಸಿದರು.
ರಾಜ್ಯದಲ್ಲಿ ಗೋವುಗಳನ್ನು ಗೋಮಾತೆ ಎಂದು ಪೂಜಿಸುವ ಲಕ್ಷಗಟ್ಟಲೆ ಜನರಿದ್ದಾರೆ. ಗೋವುಗಳ ಸೇವೆ ಪುಣ್ಯದ ಕೆಲಸವೆನ್ನುವ ಭಾವನೆ ನಮ್ಮಲ್ಲಿದೆ. ಈ ಯೋಜನೆಯಿಂದ ಗೋಶಾಲೆ ಹಾಗೂ ಗೋವುಗಳ ನಿರ್ವಹಣೆ ಸಾಧ್ಯವಾಗಲಿದೆ. ವಯಸ್ಸಾದ ಗೋವುಗಳ ನಿರ್ವಹಣೆಗೆ ಪರಿಹಾರ ಒದಗಿಸುವ ಸಕಾರಾತ್ಮಕ ಚಿಂತನೆಯಿಂದ ಈ ಯೋಜನೆಯನ್ನು ಸರ್ಕಾರ ರೂಪಿಸಿದೆ ಎಂದು ಸಿಎಂ ಹೇಳಿದರು.
ಜೀವನಕ್ಕೆ ಆಧಾರವಾಗಿರುವ ಗೋವು ಸಾಕಾಣಿಕೆ
ಕಾಮಧೇನು ಎಂದೇ ಕರೆಯಲ್ಪಡುವ ಗೋವುಗಳಿಲ್ಲದೆ ಮನುಷ್ಯನ ಬದುಕಿಲ್ಲ. ಗೋವು ಸಾಕಾಣಿಕೆಯಿಂದ ಹಾಲು, ಇತ್ಯಾದಿ ಉತ್ಪನ್ನಗಳಿಂದ ಜೀವನದ ಆಧಾರವಾಗಿಸಿಕೊಂಡಿದ್ದಾರೆ. ನಮ್ಮ ಸರ್ಕಾರ ಗೋಹತ್ಯೆ ಕಾನೂನನ್ನು ಜಾರಿಗೆ ತರುವಾಗ, ವಯಸ್ಸಾದ ಗೋವುಗಳ ಸಾಕಾಣಿಕೆಯಿಂದ ರೈತರಿಗೆ ಹೊರೆಯಾಗುತ್ತದೆ ಎನ್ನುತ್ತಿದ್ದರು. ರೈತ ಗೋವುಗಳನ್ನು ಹೊರೆ ಎಂದು ತಿಳಿದೇ ಇಲ್ಲ. ಗೋ ಸಂಪತ್ತನ್ನು ಉಳಿಸಿಕೊಂಡರೆ ಆಹಾರ, ಆದಾಯ, ಪೌಷ್ಟಿಕತೆಯನ್ನು ನೀಡುತ್ತದೆ. ಇಂತಹ ಗೋವುಗಳು ವಯಸ್ಸಾದ ನಂತರ ವಧೆ ಮಾಡುವ ಕೃತ್ಯಕ್ಕೆ ಕೆಲವರು ಪ್ರೋತ್ಸಾಹ ನೀಡುತ್ತಾರೆ. ನಮ್ಮ ದೇಶದ ಸಂಸ್ಕೃತಿ, ಜೀವ ಉಳಿಸುವುದೇ ಹೊರತು ವಧೆ ಮಾಡುವುದಲ್ಲ ಎಂದರು.
ಮನೆಬಾಗಿಲಿಗೆ ತೆರಳಿ ದನಕರುಗಳಿಗೆ ಚಿಕಿತ್ಸೆ
ಗೋ ಸಂಪತ್ತಿನ ರಕ್ಷಣೆಗಾಗಿ 100 ಗೋಶಾಲೆಗಳನ್ನು ಪ್ರಾರಂಭ, ಗೋ ಉತ್ಪನ್ನಗಳ ಮಾರಾಟಕ್ಕಾಗಿ ಗೋ ಮಾತಾ ಸಹಕಾರ ಸಂಘವನ್ನು ಸ್ಥಾಪಿಸಲಾಗುವುದು. ಔಷಧಿ ವ್ಯವಸ್ಥೆ, 400 ಪಶುವೈದ್ಯರ ನೇಮಕಾತಿ, ಡಿಪ್ಲೊಮಾ ಮಾಡಿದ ವಿದ್ಯಾರ್ಥಿಗಳಿಗಾಗಿ 250 ಹುದ್ದೆ ಭರ್ತಿಗೊಳಿಸಿ ಗೋಸೇವೆ, ಪಶುಸೇವೆಗೆ ಅವಕಾಶ ಕಲ್ಪಿಸಲಾಗುವುದು. ರೋಗಗ್ರಸ್ತ ದನಕರುಗಳ ಚಿಕಿತ್ಸೆಗೆ ಅನುಕೂಲವಾಗುವಂತಹ ಸಂಚಾರಿ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗಿದ್ದು, ದನಕರುಗಳಿಗೆ ಮನೆಬಾಗಿಲಿಗೆ ತೆರಳಿ ಚಿಕಿತ್ಸೆ ಕೊಡಿಸುವಂತಹ ಮಾನವೀಯ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಪ್ರಾರಂಭಿಸಿರುವುದು ಅಭಿನಂದನೀಯ ಎಂದರು.
ರಾಜ್ಯದಲ್ಲಿ ಕ್ಷೀರ ಆರ್ಥಿಕ ಕ್ರಾಂತಿ
ನಂದಿನ ಕ್ಷೀರ ಅಭಿವೃದ್ಧಿ ಸಹಕಾರಿ ಬ್ಯಾಂಕನ್ನು ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ಸ್ಥಾಪಿಸಲಾಗುತ್ತಿದೆ. 3600 ಕೋಟಿ ರೂ.ಗಳ ಬಂಡವಾಳದಿಂದ ಹಾಲು ಉತ್ಪಾದಿಸುವ ರೈತರಿಗೆ ಸುಲಭ ದರದಲ್ಲಿ ಸಾಲ ನೀಡುವ ಮೂಲಕ ಆರ್ಥಿಕ ಅಭಿವೃದ್ದಿಗೊಳಿಸಲಾಗುವುದು. ರಾಜ್ಯದಲ್ಲಿ ಕ್ಷೀರ ಆರ್ಥಿಕ ಕ್ರಾಂತಿ ಆಗಲಿದೆ. ಗೋವುಗಳ ವಿವಿಧ ತಳಿಗಳ ಅಭಿವೃದ್ಧಿ, ಹಾಲು ಮೆಗಾ ಡೈರಿ ಸ್ಥಾಪನೆಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ಸೆಕೆಂಡರಿ ಕೃಷಿ ನಿರ್ದೇಶನಾಲಯ ಮಾಡಿ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ, ಮಾರುಕಟ್ಟೆ ಕಲ್ಪಿಸುವ ಉದ್ದೇಶಿಂದ ಸ್ಥಾಪಿಸಲಾಗಿದೆ. ರೈತರ, ಶ್ರಮಿಕರ ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಲು ಸರ್ಕಾರ ಬದ್ಧವಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಸಹಕಾರ, ಪಶುಸಂಗೋಪನೆ ಇಲಾಖೆಗಳನ್ನು ಸಂಯೋಜನೆಗೊಳಿಸುವ ಮೂಲಕ ಮಾಹತ್ಮಾಗಾಂಧಿಯವರ ಗ್ರಾಮಾಭಿವೃದ್ಧಿಯ ಕನಸನ್ನು ಸಾಕಾರಗೊಳಿಸಲಾಗುವುದು. ಈ ಎಲ್ಲ ಕಾರ್ಯಕ್ರಮಗಳಿಗೆ ಪ್ರೇರಣಾಶಕ್ತಿಯಾಗಿರುವ ಗೋಮಾತೆಯ ಆರೋಗ್ಯ ರಕ್ಷಣೆ ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.