ದಂಡದ ಹಣದಲ್ಲೇ ಹೆಲ್ಮೆಟ್ ಖರೀದಿಸಿ
Team Udayavani, Sep 30, 2019, 3:05 AM IST
ಹುಣಸೂರು: ಇಲ್ಲಿನ ಪೊಲೀಸರು ವಿನೂತನವಾಗಿ ಜಾಗೃತಿ ಮೂಡಿಸುವ ಮೂಲಕ ವಾಹನ ಸವಾರರ ಸ್ನೇಹಿಯಾಗಿ ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟು ದಿನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ದಂಡ ಕಟ್ಟಿಸಿಕೊಳ್ಳುತ್ತಿದ್ದ ಪೊಲೀಸರು ಇದೀಗ ಹೆಲ್ಮೆಟ್ ಧರಿಸದೇ ಬೈಕ್ ಓಡಿಸುವ ಸವಾರರಿಗೆ ಜಾಗೃತಿ ಮೂಡಿಸಲು ಸ್ಥಳದಲ್ಲೇ ಹೆಲ್ಮೆಟ್ ಖರೀದಿಸಿ, ಬಳಸುವಂತೆ ಪ್ರೇರೇಪಿಸುತ್ತಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.
ತಾಲೂಕಿನಾದ್ಯಂತ ಹೆಲ್ಮೆಟ್ ಇಲ್ಲದೇ ದ್ವಿಚಕ್ರ ವಾಹನ ಓಡಿಸುತ್ತಿದ್ದ ಸವಾರರಿಗೆ ಇಷ್ಟು ದಿನ ದಂಡ ಕಟ್ಟಿಸಿಕೊಂಡು ವಾಹನ ಬಿಟ್ಟು ಬಿಡುತ್ತಿದ್ದರು. ನಂತರದಲ್ಲಿ ಮುಖ್ಯ ರಸ್ತೆಗಳಲ್ಲಿ ಪೊಲೀಸರು ಬೈಕ್ ಹಿಡಿಯುವ ಬಗ್ಗೆ ಮಾಹಿತಿ ಪಡೆಯುತ್ತಿದ್ದ ಸವಾರರು ಗಲ್ಲಿಗಲ್ಲಿಗಳಲ್ಲಿ (ಬದಲಿ ಮಾರ್ಗ) ಸುತ್ತಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದರು. ಈ ಮಾರ್ಗದಲ್ಲಿ ಪೊಲೀಸರು ಇರುವುದಿಲ್ಲ ಎಂಬ ಕಾರಣಕ್ಕೆ ಹೆಲ್ಮೆಟ್ ಧರಿಸದೇ ಸಂಚರಿಸುತ್ತಿದ್ದರು.
ಮನವೊಲಿಕೆ: ಇದನ್ನು ಮನಗಂಡ ನಗರ ಪೊಲೀಸ್ ಠಾಣೆ ಎಸ್‌ಐ ಮಹೇಶ್ ನೇತೃತ್ವದಲ್ಲಿ ಇದೀಗ ದ್ವಿಚಕ್ರ ವಾಹನ ಸವಾರರಿಗೆ ನೀವು ದಂಡ (500 ರೂ.) ಕಟ್ಟುವ ಹಣದಲ್ಲೇ ಹೆಲ್ಮೆಟ್ ಖರೀದಿಸಿರೆಂಬ ಸಲಹೆ ನೀಡಿ ಮನವೊಲಿಸಿ, ಸ್ಥಳದಲ್ಲೇ ಬೈಕ್ ನಿಲ್ಲಿಸಿ, ಹೊಸ ಹೆಲ್ಮೆಟ್ ಖರೀದಿಸಿದ ಜೊತೆಗೆ ಬಿಲ್ ತೋರಿಸಿದ ನಂತರವಷ್ಟೇ ವಾಹನಗಳನ್ನು ಬಿಟ್ಟು ಕಳುಹಿಸುತ್ತಿದ್ದಾರೆ. ಪೊಲೀಸರ ವಿನೂತನ ಪ್ರಯೋಗಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.