ಬಾಂಬ್‌ಗೆ ಬೆಂಗಳೂರಲ್ಲೇ ಕಚ್ಚಾ ವಸ್ತು ಖರೀದಿ

500ಡಿ ಮಾರ್ಗದ ಬಿಎಂಟಿಸಿ ಬಸ್‌ ಏರಿ ಕೆಫೆಗೆ ಬಂದಿದ್ದ ಶಂಕಿತ

Team Udayavani, Mar 3, 2024, 11:51 PM IST

ಬಾಂಬ್‌ಗೆ ಬೆಂಗಳೂರಲ್ಲೇ ಕಚ್ಚಾ ವಸ್ತು ಖರೀದಿ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟಕ್ಕೆ ಬಳಸಿದ್ದ ಸುಧಾರಿತಾ ಸ್ಫೋಟಕ ಸಾಧನಾ (ಐಇಡಿ) ತಯಾರಿಸಲು ಬೆಂಗಳೂರಲ್ಲೇ ಕಚ್ಚಾ ವಸ್ತುಗಳನ್ನು ಖರೀದಿಸಲಾಗಿದೆ ಎಂಬುದು ತನಿಖಾ ಸಂಸ್ಥೆಗಳ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸ್ಫೋಟ ನಡೆದ ಸ್ಥಳದಲ್ಲಿ ಬ್ಯಾಟರಿಗಳು, ಗನ್‌ ಪೌಡರ್‌, ಪೋಟ್ಯಾಷಿಯಂ ನೈಟ್ರೇಟ್‌, ಹೈಡ್ರೋಜನ್‌ ಪರಾಕ್ಸೆ„ಡ್‌ ಮತ್ತು ಟೈಮರ್‌ ಹಾಗೂ ಬಿಸಿಯಾಗುವ ಬಲ್ಬ್ ಗಳು ಪತ್ತೆಯಾಗಿದ್ದವು. ಈ ಎಲ್ಲ ವಸ್ತುಗಳನ್ನು ಸ್ಥಳೀಯವಾಗಿಯೇ ನೇರವಾಗಿ ಅಥವಾ ಆನ್‌ಲೈನ್‌ ಮೂಲಕ ಖರೀದಿಸಲಾಗಿದೆ ಎಂಬ ಮಾಹಿತಿ ಸ್ಪಷ್ಟವಾಗಿದೆ.

ಈ ಹಿಂದೆ ನಡೆದ ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಮತ್ತು ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ನಡೆದ ಪ್ರಾಯೋಗಿಕ ಸ್ಫೋಟದಲ್ಲೂ ಇದೇ ರಾಸಾಯಿಕ ವಸ್ತುಗಳನ್ನು ಬಳಸಲಾಗಿದೆ. ರಾಮೇಶ್ವರ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿ ಪ್ರಕಾರ, ಕೃತ್ಯದಲ್ಲಿ ಐಸಿಸ್‌ ಸಂಘಟನೆ ಕೈವಾಡದ ಬಗ್ಗೆ ಮಾಹಿತಿ ಸಿಕ್ಕಿದೆ.

ಹೀಗಾಗಿ ಶಂಕಿತ ವ್ಯಕ್ತಿ ಹಾಗೂ ಆತನ ಸಹಚರರು ಸ್ಥಳೀಯವಾಗಿ ರಾಸಾಯನಿಕ ವಸ್ತುಗಳನ್ನು ಖರೀದಿಸಿ ನಗರದ ಹೊರವಲಯ ಅಥವಾ ಗಡಿಭಾಗದಲ್ಲೇ ತಯಾರು ಮಾಡಿರುವ ಸಾಧ್ಯತೆ ಇದೆ. ಅದಕ್ಕೆ ಪುಷ್ಟಿ ನೀಡುವಂತೆ ಶಂಕಿತ ವ್ಯಕ್ತಿಯ ಚಲನವಲನಗಳು ಸೆರೆಯಾಗಿರುವ ಸಿಸಿ ಕ್ಯಾಮೆರಾ ದೃಶ್ಯಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರಿಗೆ ಸಿಕ್ಕಿರುವ ದೃಶ್ಯಾವಳಿಗಳಲ್ಲಿ ಆರೋಪಿ ರಾಮೇಶ್ವರ ಹೋಟೆಲ್‌ಗಿಂತ ಹಿಂದೆ ಎರಡು ಕಿಲೋ àಮೀಟರ್‌ ದೂರದಲ್ಲೇ ಬಸ್‌ ಹತ್ತಿರುವುದು ಸೆರೆಯಾಗಿದೆ. ಸಿಟಿಯಿಂದ ಹೊರಡುವ 500ಡಿ ಬಸ್‌ನಲ್ಲಿ ಆರೋಪಿ ಬಸ್‌ ಹತ್ತಿ, ಕುಂದಲಹಳ್ಳಿ ಬಸ್‌ ನಿಲ್ದಾಣದಲ್ಲಿ ಇಳಿದು ಅಲ್ಲಿಂದ ಹೋಟೆಲ್‌ಗೆ ನಡೆದುಕೊಂಡೇ ಹೋಗಿದ್ದಾನೆ. ಮತ್ತೂಂದೆಡೆ ಮುಖ ಚಹರೆ ಪತ್ತೆಯಾಗಬಾರದೆಂಬ ಕಾರಣಕ್ಕೆ ಶಂಕಿತ ಬಸ್‌ ಏರಿದಾಗ, ಮುಖಕ್ಕೆ ಧರಿಸಿದ್ದ ಮಾಸ್ಕ್, ಟೋಪಿ ಹಾಗೂ ಬ್ಯಾಗ್‌ ತೆಗೆಯಲು ಮುಂದಾಗಿದ್ದಾನೆ. ಆದರೆ ಬಸ್‌ನಲ್ಲಿ ಸಿಸಿ ಕ್ಯಾಮರಾ ಇರುವುದು ಗಮನಿಸುತ್ತಿದ್ದಂತೆ ಮತ್ತೆ ಮಾಸ್ಕ್, ಟೋಪಿ, ಕಣ್ಣಿನ ಗ್ಲಾಸ್‌ ಸರಿ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಗಡಿಭಾಗವೇ ಆಯ್ಕೆ ಏಕೆ?
ರಾಮೇಶ್ವರಂ ಕೆಫೆಯಿಂದ ಹೊಸೂರು ಮಾರ್ಗವಾಗಿ ನೆರೆ ರಾಜ್ಯಕ್ಕೆ ತೆರಳಲು ಕನಿಷ್ಠ 1 ಗಂಟೆ ಬೇಕು. ಹೀಗಾಗಿ ಶಂಕಿತ, ತಾನೂ ಹೋಟೆಲ್‌ನಿಂದ ತೆರಳಿ ಒಂದು ಗಂಟೆ ಬಳಿಕ ಬಾಂಬ್‌ ಸ್ಫೋಟಿಸಲು ಟೈಮರ್‌ ಅಳವಡಿಸಿದ್ದಾನೆ. ಸ್ಫೋಟದ ಬಳಿಕ ಪೊಲೀಸರು ಸ್ಥಳಕ್ಕೆ ಬರುವ ಸಮಯ ಹಾಗೂ ನಗರಾದ್ಯಂತ ಅಲರ್ಟ್‌ ಆಗಿ ನಾಕಾಬಂದಿ ಹಾಕಲು ಕನಿಷ್ಠ 10-15 ನಿಮಿಷ ಬೇಕು. ಅಷ್ಟರಲ್ಲಿ ಗಡಿ ದಾಟಬಹುದು ಎಂಬುದು ಶಂಕಿತನ ಲೆಕ್ಕಚಾರ ಇರಬಹುದು ಎಂದು ತನಿಖಾ ಸಂಸ್ಥೆಗಳು ಅನುಮಾನ ವ್ಯಕ್ತಪಡಿಸಿವೆ.700ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ‌. ಜತೆಗೆ ತಮಿಳುನಾಡಿನ ಕ್ರೈಂ ಬ್ರ್ಯಾಂಚ್‌ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ, ತನಿಖಾ ಸಂಸ್ಥೆಗಳಿಗೆ ತಮ್ಮ ವ್ಯಾಪ್ತಿಯ ಸಿಸಿ ಕ್ಯಾಮೆರಾ ದೃಶ್ಯಗಳನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.