“ಪ್ರಾಥಮಿಕ ಶಿಕ್ಷಣದಲ್ಲಿಯೇ ಗುಣಮಟ್ಟ ಇರಬೇಕು’
Team Udayavani, Jul 22, 2019, 3:00 AM IST
ಬೆಂಗಳೂರು: ಪ್ರಾಥಮಿಕ ಶಿಕ್ಷಣ ಗುಣಮಟ್ಟದಿಂದ ಕೂಡಿದರೆ ಮಾತ್ರ ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸಾಧ್ಯ ಎಂದು ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಸೋಮಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದರು. ರಾಜ್ಯ ವಿಶ್ವವಿದ್ಯಾಲಯಗಳ ವಿಶ್ರಾಂತ ಕುಲಪತಿಗಳ ವೇದಿಕೆಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಾಥಮಿಕ ಶಿಕ್ಷಣ ಹೆಚ್ಚು ಪ್ರಮಾಣ ಬೀರುವುದರಿಂದ ಪ್ರಾಥಮಿಕ ಹಂತದ ಶಿಕ್ಷಣವನ್ನು ಗಟ್ಟಿಗೊಳಿಸಬೇಕು.
ಮಕ್ಕಳ ಭವಿಷ್ಯದ ಮೇಲೆ ಪ್ರಭಾವ ಬೀರುವ ಮೌಲ್ಯಗಳನ್ನು ಪ್ರಾಥಮಿಕ ಹಂತದ ಶಿಕ್ಷಕರು ಹೊಂದಿರಬೇಕು. ಅಂದರೆ ಮಕ್ಕಳ ಬೌದ್ಧಿಕ ವಿಕಸನಗೊಳ್ಳಲು ಸಾಧ್ಯ ಎಂದರು. ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಿಂದ ಬರುವ ಮಕ್ಕಳಿಗೆ ಈ ರೀತಿಯ ಶಿಕ್ಷಣ ನೀಡಿದರೆ ಶೈಕ್ಷಣಿಕ ಅಭಿವೃದ್ಧಿಯಾಗಬಹುದು. ದೇಶದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಶಿಕ್ಷಣದಲ್ಲಿ ಪ್ರಗತಿ ಸಾಧಿಸಿದರೆ ಆರ್ಥಿಕ, ಸಾಮಾಜಿಕ ಪರಿವರ್ತನೆಯಾಗಲಿದೆ.
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಾಗಿದ್ದು, ದೇಶದ ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲಿ ಉತ್ಕೃಷ್ಟವಾದ ಹಾಗೂ ಆಧುನಿಕ ಕೌಶಲ್ಯಾಧರಿತ ಶಿಕ್ಷಣ ಸಿಗಬೇಕು ಎಂದು ಹೇಳಿದರು. ಶಿಕ್ಷಣ ತಜ್ಞ ಪ್ರೊ.ಓ.ಅನಂತರಾಮಯ್ಯ ಮಾತನಾಡಿ, ನೂತನ ಶಿಕ್ಷಣ ನೀತಿಯಲ್ಲಿ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ಮೂಲಕ ಎಲ್ಲ ಹಂತಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಓಬಿಸಿ ವರ್ಗದವರಿಗೆ ಪ್ರವೇಶಾತಿ ಸಿಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.