ಸೋಂಕು ಹೆಚ್ಚಿರುವ ದೇಶಗಳಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ
Team Udayavani, Nov 21, 2021, 7:30 AM IST
ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ ದೇಶಗಳಿಂದ ವಿಮಾನ ನಿಲ್ದಾಣ ಹಾಗೂ ಬಂದರು ಮೂಲಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೊರೊನಾ ನೆಗೆಟಿವ್ ವರದಿ ಹೊಂದಿದ್ದರೂ ಮತ್ತೂಮ್ಮೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಬೇಕು ಮತ್ತು ಹೋಂ ಕ್ವಾರಂಟೈನ್ಗೆ ಒಳಪಡಿಸಬೇಕು ಎಂದು ಸರಕಾರ ಆದೇಶಿಸಿದೆ.
ಕೊರೊನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ್ದು, ಎ-ಕೆಟಗರಿಯಲ್ಲಿರುವ 99 ದೇಶಗಳಿಂದ ಬರುವವರಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೆ ಕ್ವಾರಂಟೈನ್ನಿಂದ ವಿನಾಯಿತಿ ನೀಡಲಾಗಿದೆ. ಆದರೆ, ಸೋಂಕು ಹೆಚ್ಚು ಎಂದು ಗುರುತಿಸಿರುವ ಯೂರೋಫ್ ರಾಷ್ಟ್ರಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೊಟ್ಸಾನಾ, ಚೀನಾ, ಮ್ಯಾರಿಷಸ್, ನ್ಯೂಜಿಲೆಂಡ್ನಿಂದ ಬರುವವರು ಆಗಮಿಸುವ 72 ಗಂಟೆಗಳಿಗಿಂತ ಮೊದಲು ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಅಪ್ಲೋಡ್ ಮಾಡಬೇಕು. ಜತೆಗೆ ರಾಜ್ಯಕ್ಕೆ ಆಗಮಿಸಿದ ಬಳಿಕವೂ ಮತ್ತೂಮ್ಮೆ ಪರೀಕ್ಷೆಗೆ ಒಳಪಡಬೇಕು. ನೆಗೆಟಿವ್ ಬಂದರೂ 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ಗೆ ಒಳಪಡಬೇಕು. 8ನೇ ದಿನ ಮತ್ತೂಮ್ಮೆ ಪರೀಕ್ಷೆ ನಡೆಸಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.