Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Team Udayavani, Apr 26, 2024, 7:03 AM IST
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ 15 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ 1ನೇ ಸಿಸಿಎಚ್ ನ್ಯಾಯಾಲಯದ ತೀರ್ಪು ನೀಡಿದೆ.
ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿ ಕಾದಿರಿಸಿದ್ದ ತೀರ್ಪನ್ನು ನ್ಯಾಯಾಧೀಶರಾದ ಮುರಳೀಧರ ಪೈ ಗುರುವಾರ ಪ್ರಕಟಿಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖೀಸಲಾಗಿದೆ.
ಪ್ರಕರಣದಲ್ಲಿ ಕಿಂಗ್‌ಪಿನ್ ಶಿವಕುಮಾರಯ್ಯ ಅಲಿಯಾಸ್ ಗುರೂಜಿ ಸಹಿತ 19 ಮಂದಿ ಆರೋಪಿಗಳಿದ್ದರು. ಈ ಪೈಕಿ ವಿಚಾರಣೆ ಹಂತದಲ್ಲಿಯೇ ಆರೋಪಿಗಳಾಗಿದ್ದ ಓಬಳರಾಜು, ರುದ್ರಪ್ಪ ಮತ್ತು ರಂಗನಾಥ್ ವಿರುದ್ಧ ಆರೋಪಗಳನ್ನು ಕೈ ಬಿಡಲಾಗಿತ್ತು. 2ನೇ ಆರೋಪಿ ಶಿವಕುಮಾರಯ್ಯ ಅಲಿಯಾಸ್ ಗುರೂಜಿ ವಿಚಾರಣ ಹಂತದಲ್ಲಿಯೇ ಮೃತಪಟ್ಟಿದ್ದ. ಹೀಗಾಗಿ ಅವರ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಉಳಿದಂತೆ ಕುಮಾರಸ್ವಾಮಿ, ಈರಮಲ್ಲಯ್ಯ, ಸಂತೋಷ್ ಅಗಸಿಮನಿ, ಕೆಂ.ಎಂ. ಮುರಳೀಧರ ಮತ್ತು ಅನಿಲ್ ಕುಮಾರ್ ಸಹಿತ 15 ಮಂದಿಯನ್ನು ಖುಲಾಸೆಗೊಳಿಸಿ ಇದೀಗ ತೀರ್ಪು ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.