R Ashok ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿರುವುದು ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ
ಅವರೇ ನೇಮಕ ಮಾಡಿದ ಲೋಕಾಯುಕ್ತರ ಬಗ್ಗೆ ಗೌರವ ಇಲ್ಲವೇ
Team Udayavani, Nov 6, 2024, 4:51 PM IST
ಹುಬ್ಬಳ್ಳಿ: ಲೋಕಾಯುಕ್ತರ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ಅಗೌರವಾಗಿ ಮಾತನಾಡಿರುವುದು ಸರಿಯಲ್ಲ. ಈ ಹೇಳಿಕೆಯ ವಿರುದ್ಧ ಲೋಕಾಯುಕ್ತರು ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ನ.6ರ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮ್ಯಾಚ್ ಫಿಕ್ಸಿಂಗ್ ಎಂದು ಆರ್. ಅಶೋಕ ಹೇಳಿರುವುದು ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ. ಲೋಕಾಯುಕ್ತ ಯಾರ ಕಾಲದಲ್ಲಿ ನೇಮಕ ಮಾಡಿದರು ಎಂಬುದು ಅವರಿಗೆ ಗೊತ್ತಿದೆಯೇ. ಅವರೇ ನೇಮಕ ಮಾಡಿದ ಲೋಕಾಯುಕ್ತರ ಬಗ್ಗೆ ಗೌರವ ಇಲ್ಲವೇ ಎಂದು ಪ್ರಶ್ನಿಸಿದರು.
ಈ ಹೇಳಿಕೆಯು ನ್ಯಾಯಲಯ ಹಾಗೂ ನ್ಯಾಯಾಲಯ ಪೀಠಕ್ಕೆ ಮಾಡಿದ ಅವಮಾನವಾಗಿದೆ. ಲೋಕಾಯುಕ್ತ ಸ್ಥಾನದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದು ಅಗೌರವ ತೋರಿದಂತೆ. ಇದನ್ನು ಲೋಕಾಯುಕ್ತರು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಡಾ ಪ್ರಕಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ನೊಟೀಸ್ ಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ. ಕಾನೂನಿಗೆ ಗೌರವ ಕೊಡುವ ನಮ್ಮ ಮುಖ್ಯಮಂತ್ರಿ ಎಂದು ಖುಷಿ ಪಡಬೇಕು. ಕೇವಲ ಎರಡು ಗಂಟೆ ವಿಚಾರಣೆ ಮಾಡಿದ್ದಾರೆ. ಏನು ಪ್ರಶ್ನೆ ಕೇಳಿದ್ದಾರೆ ಎನ್ನುವ ಇವರು ಅಧಿಕಾರಿಗಳಾ ಅಥವಾ ವಿಚಾರಣಾಧಿಕಾರಿಗಳಾ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್
Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ
MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.