ಕಾಂಗ್ರೆಸ್ಗೆ ನೆಲೆ ಇಲ್ಲದಂತೆ ಮಾಡುತ್ತೇವೆ – ಅಶೋಕ್
Team Udayavani, Oct 27, 2022, 7:40 PM IST
ಕೋಲಾರ: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಈಗಾಗಲೇ ಉತ್ತರ ದಕ್ಷಿಣ ಆಗಿದ್ದಾರೆ. ನಾನೊಂದು ತೀರ ನೀನೊಂದು ತೀರ ಎಂಬಂತಾಗಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತಳವೂರಲು ನಾವು ಬಿಡುವುದಿಲ್ಲ. ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಸರ್ವನಾಶ ಆಗಿದೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ನ.11 ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪುತ್ಥಳಿಯನ್ನು ಪ್ರಧಾನಿ ಮೋದಿ ಅನಾವರಣ ಮಾಡಲಿರುವ ಹಿನ್ನೆಲೆಯಲ್ಲಿ ಕೆಂಪೇಗೌಡರ ರಥಯಾತ್ರೆಗೆ ಸಚಿವರಾದ ಆರ್.ಅಶೋಕ್, ಅಶ್ವತ್ಥ ನಾರಾಯಣ, ಮುನಿರತ್ನ ಹಾಗೂ ಸಂಸದ ಮುನಿಸ್ವಾಮಿ ಚಾಲನೆ ನೀಡಿದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅಶೋಕ್, ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ, ತೋಡೋ ರೀತಿ ಆಗಿದೆ. 224 ಕ್ಷೇತ್ರಗಳಲ್ಲಿ ಸಿದ್ದರಾಮಯ್ಯಗೆ ಸೂಕ್ತ ಕ್ಷೇತ್ರವೇ ಇನ್ನೂ ಸಿಕ್ಕಿಲ್ಲ. ಇದರಿಂದಲೇ ಗೊತ್ತಾಗುತ್ತೆ ಅವರು ಎಷ್ಟು ತೊಂದರೆಯಲ್ಲಿದ್ದಾರೆ ಅಂತೆ ಎಂದು ವ್ಯಂಗ್ಯವಾಡಿದರು.
ತಮ್ಮ ಕ್ಷೇತ್ರದಲ್ಲಿಯೇ ಮಲ್ಲಿಕಾರ್ಜುನ ಖರ್ಗೆ ಗೆಲ್ಲೋಕೆ ಆಗಲಿಲ್ಲ, ಇನ್ನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವರ ಆಯ್ಕೆಯಿಂದ ರಾಜ್ಯದಲ್ಲಿ ಯಾವುದೇ ಪರಿಣಾಮ ಬೀರಲ್ಲ. ರಿಮೋಟ್ ಆಗಿ ಅವರು ಕೆಲಸ ಮಾಡ್ತಾರೆ. ಕಾಂಗ್ರೆಸ್ನಲ್ಲಿ ಕೆಲವರು ನೆಲೆ ಇಲ್ಲದೆ ಓಡಾಡುತ್ತಿದ್ದಾರೆ. ಮೊದಲು ಒಂದು ಕ್ಷೇತ್ರದಲ್ಲಿ ನೆಲೆ ಕಂಡುಕೊಳ್ಳಲಿ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.