ಮಂತ್ರಾಲಯ: ಉತ್ತರಾರಾಧನೆಯೊಂದಿಗೆ ರಾಯರ ಆರಾಧನೆ ಸಂಪನ್ನ
Team Udayavani, Aug 11, 2017, 11:39 AM IST
ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 346ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಗುರುವಾರ ಪ್ರಹ್ಲಾದರಾಜರ ರಥೋತ್ಸವ ಅಸಂಖ್ಯಾತ ಭಕ್ತರ ಮಧ್ಯೆ ವಿಜೃಂಭಣೆಯಿಂದ ನೆರವೇರಿತು.
ಗುರುವಾರ ಪ್ರಾತಃಕಾಲ ಶ್ರೀಮಠದಲ್ಲಿ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಗ್ರಂಥ ಪಾರಾಯಣ, ಮೂಲ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ವೃಂದಾವನವನ್ನು ವಿಶೇಷ ಹೂವುಗಳಿಂದ ಅಲಂಕರಿಸಲಾಗಿತ್ತು. ಶ್ರೀಮಠದ ಪ್ರಾಂಗಣದಲ್ಲಿ ಶ್ರೀಗಳು ಸೇರಿ ಮಠದ ಸಿಬ್ಬಂದಿ ವಸಂತೋತ್ಸವ ಅಂಗವಾಗಿ ಗುಲಾಲು ಎರಚಿ ಸಂಭ್ರಮಿಸಿದರು. ನಂತರ ಪ್ರಹ್ಲಾದರಾಜರ ಮೂರ್ತಿಯನ್ನು ಪ್ರಾಂಗಣದಿಂದ ರಥದವರೆಗೆ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಲಾಯಿತು. ಬಳಿಕ ರಥವನ್ನೇರಿ ವಿಶೇಷ ಪೂಜೆ ಸಲ್ಲಿಸಿದ ಶ್ರೀ ಸುಬುಧೇಂದ್ರ ತೀರ್ಥರು ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು. ರಥೋತ್ಸವದಲ್ಲಿ ದೇಶ, ವಿದೇಶಗಳ ಭಕ್ತರು ಪಾಲ್ಗೊಂಡಿದ್ದರು.
ಕಾಪ್ಟರ್‌ನಿಂದ ಪುಷ್ಪವೃಷ್ಟಿ
ರಥೋತ್ಸವ ಶುರುವಾದ ಕೆಲ ಹೊತ್ತಿನಲ್ಲೇ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ
ತೀರ್ಥರು ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ರಾಯರಿಗೆ ಪುಷ್ಪವೃಷ್ಟಿ ಮಾಡಿದರು. ಆಗಸದಲ್ಲಿ ಎರಡು ಸುತ್ತು
ಹಾಕಿದ ಹೆಲಿಕಾಪ್ಟರ್ ನಿಂದ ಪುಷ್ಪಾರ್ಚನೆ ನೆರವೇರಿಸಿದರು.
ನಾಲ್ಕು ವರ್ಷದ ನಂತರ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಆಗಮಿಸಲಿದ್ದು, ಈ ನಿಟ್ಟಿನಲ್ಲಿ ಶ್ರೀಮಠ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದೆ ಎಂದು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.