ಒಕ್ಕೂಟ ವ್ಯವಸ್ಥೆಯಲ್ಲಿ ಮಾತೃ ಭಾಷೆಗೆ ಸ್ವಾತಂತ್ರ್ಯ: ರಾಹುಲ್
Team Udayavani, Oct 14, 2022, 6:35 AM IST
ಚಿತ್ರದುರ್ಗ: ಮಾತೃ ಭಾಷೆಯಲ್ಲಿ ಮಾತನಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಆಯಾ ಭಾಷೆಗಳನ್ನು ಬಳಸುವ ಸ್ವಾತಂತ್ರ್ಯವಿರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಭಾರತ್ ಜೋಡೋದ 13ನೇ ದಿನದ ಪಾದಯಾತ್ರೆಯ ಕೊನೆಯಲ್ಲಿ ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡ ಸಹಿತ ಆಯಾ ರಾಜ್ಯಗಳ ಮಾತೃಭಾಷೆಗಳ ಬಳಕೆ ಕುರಿತು ತಮ್ಮ ಭಾಷಣದಲ್ಲಿ ಒತ್ತು ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆ ಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನಿರಾಕರಿಸುವುದಕ್ಕೆ ಅಚ್ಚರಿ ವ್ಯಕ್ತಡಿಸಿದರು.
ಅನೇಕ ಯುವಕರು ನನ್ನ ಜತೆ ಮಾತನಾಡುವಾಗ ಕನ್ನಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬಗ್ಗೆ ಹೇಳುತ್ತಿದ್ದಾರೆ. ಮಾತೃಭಾಷೆ ಪರೀಕ್ಷೆಗೆ ಮಾತ್ರ ಸೀಮಿತ ಅಲ್ಲ. ಅದಕ್ಕೆ ಇತಿಹಾಸ, ಸಂಸ್ಕೃತಿ, ಪರಂಪರೆ ಇದೆ. ಆರೆಸ್ಸೆಸ್ ಮತ್ತು ಬಿಜೆಪಿಯವರಿಗೆ ಕನ್ನಡದ ಮೇಲೆ ಅಭಿಮಾನ ಇಲ್ಲ. ಕನ್ನಡವನ್ನು ಎರಡನೇ ದರ್ಜೆ ಭಾಷೆಯನ್ನಾಗಿ ನೋಡುತ್ತಿದ್ದಾರೆ. ಇದೊಂದು ಅಪಾಯಕಾರಿ ಸ್ಥಿತಿಯಾಗಿದ್ದು, ಇದನ್ನು ವಿರೋಧಿಸಬೇಕು ಎಂದರು.
ಬಿಜೆಪಿ ಮತ್ತು ಆರೆಸ್ಸೆಸ್ ಕನ್ನಡಕ್ಕೆ ಗೌರವ ಕೊಡುತ್ತಿಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಕನ್ನಡವೇ ಪ್ರಥಮ ಆದ್ಯತೆಯಾಗಿದೆ. ಕನ್ನಡಿಗರು ಕನ್ನಡ, ತಮಿಳುನಾಡಿನವರು ತಮಿಳು, ಕೇರಳದಲ್ಲಿ ಮಲಯಾಳಂ ಸಹಿತ ಆಯಾ ರಾಜ್ಯದವರು ಅವರ ಮಾತೃಭಾಷೆಯಲ್ಲಿ ವ್ಯವಹರಿಸಲು ಸ್ವಾತಂತ್ರÂವಿದೆ ಎಂದರು.
ಈ ಯಾತ್ರೆ ಭಾರತದ ಸಂಸ್ಕೃತಿ ಯನ್ನು ಬಿಂಬಿಸುತ್ತಿದೆ. ಬಸವಣ್ಣ, ಅಂಬೇಡ್ಕರ್, ಮಹಾತ್ಮಾ ಗಾಂ ಧೀಜಿ, ನಾರಾಯಣ ಗುರು ಅವರ ಧ್ವನಿಯಾಗಿದೆ. ಪಾದಯಾತ್ರೆ ಮೂಲಕ ದೇಶವನ್ನು ಒಡೆಯುವ, ಏಕತೆಗೆ ಧಕ್ಕೆ ತರುವವರ ವಿರುದ್ಧ ಸಾಗುತ್ತಿದ್ದೇವೆ ಎಂದು ಹೇಳಿದರು.
ರೈತರಿಗಾಗಿ ಸರಕಾರ ಏನು ಮಾಡಿದೆ? :
ಪಾದಯಾತ್ರೆ ಸಂದರ್ಭದಲ್ಲಿ ಶೇಂಗಾ ಬೆಳೆಯನ್ನು ನೋಡಿದೆ. ಮಳೆಯಿಂದ ಎಲ್ಲರ ಬೆಳೆಗಳು ಹಾಳಾಗಿವೆ. ರಸ್ತೆ ಪಕ್ಕದಲ್ಲಿ ತರಕಾರಿ ಕೊಳೆಯುತ್ತಿವೆ. ಆಡಳಿತದಲ್ಲಿರುವ ಬಿಜೆಪಿ ರೈತರಿಗೆ ಸಹಾಯ ಮಾಡಲು ಏನು ಮಾಡಿದೆ ಎನ್ನುವುದನ್ನು ಹೇಳಬೇಕು. ರೈತರು ಏಕೆ ಜಿಎಸ್‌ಟಿ ಕಟ್ಟಬೇಕು ಎನ್ನುವುದಕ್ಕೆ ಉತ್ತರ ಕೊಡಬೇಕು ಎಂದು ರಾಹುಲ್ ಪ್ರಶ್ನಿಸಿದರು.
ರೇಷ್ಮೆ, ಶೇಂಗಾ ಮಾಹಿತಿ ಪಡೆದ ರಾಹುಲ್ ಗಾಂಧಿ :
ಬಿ.ಜಿ.ಕೆರೆ -ಕೋನಸಾಗರ ನಡುವಿನ ಪಾದಯಾತ್ರೆ ವೇಳೆ 9 ಗಂಟೆಗೆ ರೇಷ್ಮೆ ತೋಟದ ಮನೆಯೊಂದರ ಮುಂಭಾಗದಲ್ಲಿ ಉಪಾಹಾರದ ವಿರಾಮಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಾಹುಲ್ ಅವರು ರೇಷ್ಮೆ ಸೊಪ್ಪು, ಬೆಳವಣಿಗೆ, ಹುಳುಗಳು ಗೂಡು ಕಟ್ಟುವ ಬಗ್ಗೆ ಮಾಹಿತಿ ಪಡೆದುಕೊಂಡರು. ಜತೆಗಿದ್ದ ಡಿ.ಕೆ.ಶಿವಕುಮಾರ್ ಕೂಡ ಅಗತ್ಯ ಮಾಹಿತಿ ಹಾಗೂ ರೈತರ ಸಮಸ್ಯೆಗಳನ್ನು ವಿವರಿಸಿದರು.
ಬಳ್ಳಾರಿ ಸಮಾವೇಶಕ್ಕೆ ನಾಲ್ಕು ಲಕ್ಷ ಜನ ನಿರೀಕ್ಷೆ: ಡಿಕೆಶಿ :
ಚಿತ್ರದುರ್ಗ: ಬಳ್ಳಾರಿಯಲ್ಲಿ ಅ.15ರಂದು ನಡೆಯ ಲಿರುವ ಕಾಂಗ್ರೆಸ್ ಸಮಾವೇಶಕ್ಕೆ ಸುಮಾರು 4 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮೊಳಕಾಲ್ಮೂರಿನ ಕೋನಸಾಗರ ಬಳಿ ಭಾರತ್ ಜೋಡೋ ಕ್ಯಾಂಪ್‌ನಲ್ಲಿ ಮಾತನಾಡಿದ ಅವರು, ಸಮಾ ವೇಶಕ್ಕೆ ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳನ್ನು ಕೇಂದ್ರೀಕರಿಸಿದ್ದೇವೆ. ಶನಿವಾರ ಬೆಳಗ್ಗೆ ಪಾದಯಾತ್ರೆ ನಡೆಸಿ, ಮಧ್ಯಾಹ್ನದ ಬಳಿಕ ಸಮಾವೇಶ ನಡೆಸಲಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.