Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
Team Udayavani, Oct 16, 2024, 2:11 PM IST
ರಾಯಚೂರು: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಜಾರಿ ಮಾಡುವವರೆಗೂ ಯಾವುದೇ ರೀತಿಯ ಹುದ್ದೆಗಳ ಭರ್ತಿ ಮಾಡಬಾರದು ಎಂದು ಆಗ್ರಹಿಸಿ ಎಸ್ಸಿ ಒಳ ಮೀಸಲಾತಿ ಜಾರಿ ಐಕ್ಯ ಹೋರಾಟ ಸಮಿತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗ್ಗೆ ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಡಿಸಿ ಕಚೇರಿಗೆ ಮುನ್ನುಗ್ಗುಲು ಮುಂದಾದರು. ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಡಿಸಿಯವರು ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಆದರೆ, ಡಿಸಿಯವರು ಸ್ಥಳ ಪರಿಶೀಲನೆಗೆ ಸಿಂಧನೂರಿಗೆ ತೆರಳಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟು ಹಿಡಿದರು.
ಒಳ ಮೀಸಲಾತಿ ಜಾರಿ ಕುರಿತು ಮೂರು ದಶಕಗಳ ಹೋರಾಟವು ಕೊನೆ ಹಂತಕ್ಕೆ ಬಂದು ತಲುಪಿದೆ, ಸುಪ್ರೀಂ ಕೋರ್ಟ್ ಸಹ ಸರ್ಕಾರಕ್ಕೆ ಸೂಕ್ತ ಆದೇಶ ನೀಡಿದೆ. ಆದರೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಮುಂದುವರೆಸಿದೆ. ಈಚೆಗೆ ಜಿಲ್ಲೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗುವುದು. ಅಲ್ಲಿವರೆಗೂ ಯಾವುದೇ ಹುದ್ದೆಗಳ ಭರ್ತಿಗೆ ಮುಂದಾಗುವುದಿಲ್ಲ ಎಂದಿದ್ದರು. ಈಗ 34,600 ಹುದ್ದೆಗಳ ಭರ್ತಿಗೆ ಮುಂದಾಗಿರುವುದು ಖಂಡನೀಯ. ಇದು ದಲಿತ ಹಾಗೂ ಶೋಷಿತ ಸಮುದಾಯಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರು ಹೊಂದಿರುವ ಬೆಜವಾಬ್ದಾರಿತಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕೊನೆಗೆ ಪ್ರತಿಭಟನಾಕಾರರನ್ನು ಬಂಧಿಸಿ ಸಾರಿಗೆ ಬಸ್ ಹಾಗು ಪೊಲೀಸ್ ವ್ಯಾನ್ ನಲ್ಲಿ ಬಂಧಿಸಿ ಕರೆದೊಯ್ಯಲಾಯಿತು. ಒಳ ಮೀಸಲಾತಿ ಬೇಡಿಕೆ ಮುಂದಿಟ್ಟುಕೊಂಡು ಈಚೆಗೆ ರಾಯಚೂರು ಬಂದ್ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾ*ವು
ಈ ಜಾಗ ನಮ್ಮದು… ವಿದ್ಯಾರ್ಥಿಗಳನ್ನು ಹೊರಹಾಕಿ ಶಾಲೆಗೆ ಬೀಗ ಜಡಿಯಲು ಯತ್ನಿಸಿದ ಕುಟುಂಬ
ಮೈಕ್ರೋ ಫೈನಾನ್ಸ್ ಗಳಿಂದ ಆರ್ಥಿಕ ಕ್ಷೇತ್ರ ಹಿಂಸಾತ್ಮಕ ವಾತಾವರಣವಾಗಿ ಬದಲಾಗುತ್ತಿದೆ
Hubballi: ಚಾಕು ಇರಿದು ಯುವಕನ ಕೊಲೆ ಪ್ರಕರಣ… ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು
IT Raid: ಬೆಳಗಾವಿಯ ಉದ್ಯಮಿ ದೊಡ್ಡಣ್ಣವರ ಸೇರಿ ನಾಲ್ವರು ಉದ್ಯಮಿಗಳಿಗೆ ಐಟಿ ಶಾಕ್
MUST WATCH
ಹೊಸ ಸೇರ್ಪಡೆ
ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾ*ವು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: 15 ಬೈಕ್ ಕರಕಲು
Robbery: ಮನೆಗೆ ನುಗ್ಗಿ ಚಿನ್ನ, ನಗದು ದರೋಡೆ; ಬಾಲಕ ಸೇರಿದಂತೆ ಮೂವರ ಬಂಧನ
ಈ ಜಾಗ ನಮ್ಮದು… ವಿದ್ಯಾರ್ಥಿಗಳನ್ನು ಹೊರಹಾಕಿ ಶಾಲೆಗೆ ಬೀಗ ಜಡಿಯಲು ಯತ್ನಿಸಿದ ಕುಟುಂಬ
Arrested: ಬಿಡಿಸಿಸಿ, ಅಪೆಕ್ಸ್ ಬ್ಯಾಂಕ್‌ಗೆ 19 ಕೋಟಿ ರೂ. ವಂಚನೆ: ಮೂವರ ಸೆರೆ