ರೈಲು ಯೋಜನೆ: ಕೇಂದ್ರ-ರಾಜ್ಯ ಒಪ್ಪಂದ


Team Udayavani, Jan 17, 2017, 3:45 AM IST

train.jpg

ಬೆಂಗಳೂರು: ನಗರದಲ್ಲಿನ ವಾಹನ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಬಹು ಉದ್ದೇಶಿತ ಸಬ್‌ಅರ್ಬನ್‌ (ಉಪನಗರ) ರೈಲು ಸಂಪರ್ಕ ಯೋಜನೆಯ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರೈಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರದ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಯೋಜನೆಗೆ ಅಗತ್ಯ ಇರುವ ಹಣ ಸಂಗ್ರಹ, ರಾಜ್ಯ ಮತ್ತು ಕೇಂದ್ರದ ಪಾಲುದಾರಿಕೆ, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ಇತರ ಸೌಲಭ್ಯ ಕಲ್ಪಿಸುವ ಕುರಿತಾದ ರೂಪುರೇಷೆಗಳನ್ನು ರೂಪಿಸುವ ಕಾರ್ಯಕ್ಕೆ ಒಪ್ಪಂದದ ಮೂಲಕ ಹಸಿರು ನಿಶಾನೆ ಸಿಕ್ಕಂತಾಗಿದೆ.

ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ನಡೆದ ಬೈಯ್ಯಪ್ಪನಹಳ್ಳಿಯಲ್ಲಿ ಹೊಸ ಕೋಚಿಂಗ್‌ ಟರ್ಮಿನಲ್‌, ಬೆಂಗಳೂರು ಮತ್ತು ರಾಮನಗರ ಹಾಗೂ ಕುಪ್ಪಂ ನಡುವೆ ಮೆಮು ಸೇವೆ, ಬೆಂಗಳೂರು-ಶಿವಮೊಗ್ಗ ಟೌನ್‌ ನಡುವೆ ಹೊಸ ಎಕ್ಸ್‌ಪ್ರಸ್‌ ರೈಲು ಸೇವೆ, ಯಶವಂತಪುರ ಪ್ಲಾಟ್‌ಫಾರಂನಲ್ಲಿ ಎಸ್ಕಲೇಟರ್‌, ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಉಪನಗರ ರೈಲು ವ್ಯವಸ್ಥೆಯ ಅಭಿವೃದ್ಧಿಗೆ ರೈಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರ ನಡುವಿನ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಬಳಿಕ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಸುರೇಶ್‌ ಪ್ರಭು, ನಗರದ ಜನತೆಯ ಬಹುದಿನಗಳ ಬೇಡಿಕೆಯಾದ ಸಬ್‌ಅರ್ಬನ್‌ ರೈಲು ಓಡಾಟಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಉಪನಗರ ಯೋಜನೆ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಶೇಕಡಾವಾರು ಪಾಲುದಾರಿಕೆ ಬಗ್ಗೆ ನಂತರ ತೀರ್ಮಾನಿಸಲಾಗುವುದು.
ಯೋಜನೆ ಪೂರ್ಣಗೊಳಿಸಲು ಅಗತ್ಯ ಬಿದ್ದರೆ ಸಾಲ ಪಡೆದುಕೊಳ್ಳಲಾಗುವುದು ಎಂದು ಹೇಳಿದರು.

ಖಾಸಗಿ ಸಹಭಾಗಿತ್ವ: ರೈಲ್ವೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಾರ್ಷಿಕ 25 ಕೋಟಿ ಡಾಲರ್‌ಗಳ ಅವಶ್ಯಕತೆ ಇದೆ. ಪ್ರತಿವರ್ಷವೂ ಈ ಮೊತ್ತ ಹೆಚ್ಚುತ್ತಲೇ ಹೋಗುತ್ತದೆ. ಹೀಗಾಗಿ, ದೇಶದಲ್ಲಿನ ರೈಲ್ವೆ ಯೋಜನೆಗಳನ್ನು
ಪೂರ್ಣಗೊಳಿಸಲು ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸುವ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರ ಜಂಟಿ ಸಹಭಾಗಿತ್ವ ಮಾತ್ರವಲ್ಲದೆ, ಖಾಸಗಿ ಸಹಭಾಗಿತ್ವದಲ್ಲಿಯೂ ಕಾರ್ಯ ನಿರ್ವಹಿಸಲಾಗುವುದು. ಸಬ್‌ಅರ್ಬನ್‌ ರೈಲು ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಇದೇ ಮಾದರಿಯಲ್ಲಿ ಕಾಯಘ¤ಗೊಳೀಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.

ಬೈಯ್ಯಪ್ಪನಹಳ್ಳಿಯಲ್ಲಿ ಹೊಸ ಕೋಚಿಂಗ್‌ ಟರ್ಮಿನಲ್‌ ನಿರ್ಮಾಣ ಯೋಜನೆಯನ್ನು 116 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಇನ್ನು 2-3 ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದರಿಂದ ಬೆಂಗಳೂರು ನಗರ, ಯಶವಂತಪುರ ಹಾಗೂ ದಂಡು ನಿಲ್ದಾಣದಲ್ಲಿರುವ ಸಂಚಾರದ ಒತ್ತಡ ಕಡಿಮೆಯಾಗಲಿದೆ. ವಿಶ್ವದಜೆರ್ಯ ಮಟ್ಟದಲ್ಲಿ ಟರ್ಮಿನಲ್‌ ತಲೆ ಎತ್ತಲಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತಲೂ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದರು.

ರೈಲ್ವೆ ಮೂಲಭೂತ ಸೌಕರ್ಯ ಅಭಿವೃದ್ದಿ ಸೇರಿದಂತೆ ಒಟ್ಟಾರೆ ಕಾರ್ಯಗಳಿಗೆ 500 ಕೋಟಿ ರೂ.ಬೇಕಾಗಲಿದ್ದು, ಅದನ್ನು ಸಹ ಕೇಂದ್ರ ಸರ್ಕಾರ ನೀಡಲು ಬದ್ಧವಿದೆ ಎಂದು ಆಶ್ವಾಸನೆ ನೀಡಿದರು.

ಮಾರ್ಚ್‌ ಅಂತ್ಯದ ವೇಳೆಗೆ ಬೆಂ-ಮೈ ಜೋಡಿ ಮಾರ್ಗ ಪೂರ್ಣ: ಬೆಂಗಳೂರು-ಮೈಸೂರು ಜೋಡಿ ಮಾರ್ಗ ಮಾರ್ಚ್‌ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ಅಲ್ಲದೆ, ಹೈಸ್ಪೀಡ್‌ ರೈಲು ಓಡಾಟ ಸಂಬಂಧ ಜರ್ಮನಿ ಕಂಪನಿಯಿಂದ
ಸಮೀಕ್ಷೆ ನಡೆಸಲು ಮುಂದಾಗಿದ್ದು, ಈ ಸಂಬಂಧ ಮಾತುಕತೆ ನಡೆಸಲಾಗಿದೆ. ರಾಜ್ಯಕ್ಕೆ ರೈಲ್ವೆ ಬಜೆಟ್‌ನಲ್ಲಿ 900 ಕೋಟಿ ರೂ. ಲಭ್ಯವಾಗುತ್ತಿತ್ತು. ಅದನ್ನು 2,700 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುವ ಕಾರಣ ಬೆಂಗಳೂರು ಸಿಟಿ-ವೈಟ್‌μàಲ್ಡ್‌ ನಡುವೆ ಡಬ್ಲಿಂಗ್‌ ಮಾಡಿದ್ದಲ್ಲಿ ಜನರಿಗೆ ಹೆಚ್ಚು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈಲ್ವೆ ಸಚಿವರು ಇದೇ ವೇಳೆ ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಬ್‌ಅರ್ಬನ್‌ ರೈಲ್ವೆ ಯೋಜನೆಗಾಗಿ ರಾಜ್ಯದ ಪಾಲು ಶೇ.80ರಷ್ಟು ಮತ್ತು ಕೇಂದ್ರದ ಪಾಲು ಶೇ.20ರಷ್ಟು ಎಂಬುದಾಗಿ ಕರಡುಪ್ರತಿಯಲ್ಲಿ ನಿಗದಿ ಮಾಡಲಾಗಿದೆ. ಆದರೆ, ಭೂಮಿಯ ಬೆಲೆ
ದುಬಾರಿಯಾಗಿರುವ ಕಾರಣ ಮತ್ತು ಸರ್ಕಾರದ ಮೇಲೆ ಇತರ ಹೊರೆಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಪಾಲು ಶೇ.80ರಷ್ಟು ನೀಡಲು ಕಷ್ಟವಾಗಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ ಶೇ.50ರಷ್ಟು ನೀಡುವಂತೆ ನಿಗದಿ ಮಾಡಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿನ ರೈಲ್ವೆ ಯೋಜನೆಗಳು ನಿಗದಿತ ಅವಧಿಯಲ್ಲಿ ಮುಗಿಯಲು ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿದ್ದು, ರಾಜ್ಯದ ಪಾಲಿನ ಮೊತ್ತವನ್ನು ನೀಡಲಾಗುವುದು.

ರೈಲ್ವೆ ಯೋಜನೆಗಾಗಿ 100 ಕೋಟಿ ರೂ.ಬಜೆಟ್‌ನಲ್ಲಿ ಮೀಸಲಿಡಲಾಗಿದೆ ಎಂದರು. ಕೇಂದ್ರ ಸಚಿವ ಅನಂತ ಕುಮಾರ್‌,
ಡಿ.ವಿ.ಸದಾನಂದಗೌಡ, ಸಚಿವರಾದ ಕೆ.ಜೆ.ಜಾರ್ಜ್‌, ಆರ್‌.ವಿ.ದೇಶಪಾಂಡೆ, ಸಭಾಪತಿ ಡಿ.ಎಚ್‌. ಶಂಕರಮೂರ್ತಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ .ಯಡಿಯೂರಪ್ಪ, ಸಂಸದರಾದ ಪಿ.ಸಿ.ಮೋಹನ್‌, ಡಿ.ಕೆ.ಸುರೇಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.