Railway; 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 61 ನಿಲ್ದಾಣ ಅಭಿವೃದ್ಧಿ: ಸೋಮಣ್ಣ
Team Udayavani, Aug 19, 2024, 12:14 AM IST
ತುಮಕೂರು: ಅಮೃತ್ ಭಾರತ್ ಯೋಜನೆಯಡಿ ರಾಜ್ಯದ 61 ರೈಲ್ವೇ ನಿಲ್ದಾಣಗಳನ್ನು 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ರವಿವಾರ ತಮ್ಮ ಕಚೇರಿ ಉದ್ಘಾಟಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ 61 ರೈಲ್ವೇ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದ್ದು, ಶೀಘ್ರದಲ್ಲೇ ಕೆಲಸ ಪ್ರಾರಂಭವಾಗಲಿದೆ. ಬೆಂಗಳೂರಿನ ಕಂಟೋನ್ಮೆಂಟ್, ಯಶವಂತಪುರ ಸೇರಿದಂತೆ ರಾಜ್ಯದ ಇತರೆಡೆ 118 ಕೋಟಿ ರೂ. ವೆಚ್ಚದಲ್ಲಿ ವ್ಯವಸ್ಥಿತ ರೈಲ್ವೇ ನಿಲ್ದಾಣಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ತುಮಕೂರಿನ ಗುಬ್ಬಿ ರೈಲ್ವೇ ನಿಲ್ದಾಣ 7 ಕೋಟಿ ರೂ. ವೆಚ್ಚದಲ್ಲಿ ಹಾಗೂ ಹಾಸನದ ಶ್ರವಣಬೆಳಗೊಳ ರೈಲು ನಿಲ್ದಾಣವನ್ನು 9 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣಗೊಳಿಸ ಲಾಗುವುದು ಎಂದು ತಿಳಿಸಿದರು.
ಹೆಸರು ಬದಲಾವಣೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ
ಬೆಂಗಳೂರಿನಿಂದ ಹುಬ್ಬಳ್ಳಿಗೆ ತುಮಕೂರು ಮೂಲಕ ವಂದೇ ಭಾರತ್ ರೈಲು ಸಂಚರಿಸುತ್ತಿದ್ದು, ತುಮಕೂರಿನಲ್ಲಿ ಆ. 24ರಿಂದ ಸಂಜೆ 6 ಗಂಟೆಗೆ ಪ್ರತಿನಿತ್ಯ ನಿಲುಗಡೆಯಾಗಲಿದೆ. ತುಮಕೂರು ರೈಲ್ವೇ ನಿಲ್ದಾಣಕ್ಕೆ ಡಾ| ಶಿವಕುಮಾರ ಸ್ವಾಮೀಜಿ ಹೆಸರು, ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡುವಂತೆಯೂ ಪತ್ರಗಳು ಬಂದಿವೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆಯೂ ತಿಳಿಸಲಾಗಿದೆ ಎಂದು ಸೋಮಣ್ಣ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.