ಬೆಂಗಳೂರಿನಲ್ಲಿ ಮಳೆ ಅವಾಂತರ; ಸರ್ಕಾರದ ವೈಫಲ್ಯವೇ ಕಾರಣ : ಸಿದ್ದರಾಮಯ್ಯ
ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ
Team Udayavani, Sep 5, 2022, 5:03 PM IST
ಮೈಸೂರು: ಬೆಂಗಳೂರಿನಲ್ಲಿ ಸತತ ಸುರಿಯುತ್ತಿರುವ ಮಳೆಯಿಂದ ವ್ಯಾಪಕ ಹಾನಿಯಾಗಿದ್ದು, ಸರ್ಕಾರದ ವೈಫಲ್ಯವೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆಗಳನ್ನು ಒತ್ತುವರಿ ಮಾಡಿ ಮನೆ ಕಟ್ಟಿದ್ದಾರೆ. ಇದರಿಂದ ಮನೆ, ರಸ್ತೆಗಳಿಗೆ ನೀರು ನುಗ್ಗುತ್ತಿದೆ. ನಮ್ಮ ಸರ್ಕಾರ ಇದ್ದಾಗ, ರಾಜಕಾಲುವೆಗಳ ಒತ್ತುವರಿ ತೆರವಿಗೆ ಚಾಲನೆ ಕೊಟ್ಟಿದ್ದೆವು. ಬಿಜೆಪಿಯವರು ಅಧಿಕಾರಕ್ಕೆ ಬಂದು ಮೂರೂವರೆ ವರ್ಷವಾದರೂ ಏನನ್ನೂ ಮಾಡಿಲ್ಲ.ಐಟಿ, ಬಿಟಿಯವರಿಗೆ ಸರಿಯಾದ ಮೂಲ ಸೌಕರ್ಯಗಳು ಬೇಕು. ಈ ಸರ್ಕಾರದವರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಇದರಿಂದಾಗಿ ಐಟಿ, ಬಿಟಿ ಕಂಪನಿಯವರು ಬೇರೆಡೆಗೆ ವಲಸೆ ಹೋಗುತ್ತಿದ್ದಾರೆ ಎಂದು ಕಿಡಿ ಕಾರಿದರು.
ಮಹಾಜನ್ ಯಾವ ರಾಜ್ಯದವರು?
ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾಜನ್ ವರದಿಯೇ ಅಂತಿಮ. ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.ನ್ಯಾಯಾಂಗ ತೀರ್ಪು ಪುನರ್ ವಿಮರ್ಶೆಗೆ ಮಹಾರಾಷ್ಟ್ರದವರು ಕೇಳಿದ್ದಾರೆ. ನಮ್ಮ ಸರ್ಕಾರದವರೂ ಸಿದ್ಧತೆ ಮಾಡಿಕೊಂಡಿದ್ದಾರೆ. ಮಹಾಜನ್ ಯಾವ ರಾಜ್ಯದವರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಏನನ್ನು ಬೇಕಾದರು ಮಾಡಿಕೊಳ್ಳಲಿ
ಮೈಸೂರು ಮೇಯರ್ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ.ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನೋದು ಗೊತ್ತಿಲ್ಲ.ಸಂಜೆ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಸಭೆ ಕರೆದಿದ್ದೇನೆ.ನಗರಪಾಲಿಕೆ ಮೇಯರ್ ವಿಚಾರವನ್ನು ಅಲ್ಲಿ ಚರ್ಚೆ ಮಾಡುತ್ತೇನೆ.ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ.ಅವರು ಏನನ್ನು ಬೇಕಾದರು ಮಾಡಿಕೊಳ್ಳಲಿ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.