ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ
Team Udayavani, Mar 19, 2023, 6:38 AM IST
ಬೆಂಗಳೂರು: ಕರಾವಳಿ, ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆಗಳಿದ್ದು, ಇದರ ಜತೆಗೆ ಉಷ್ಣಾಂಶವೂ 3 ಡಿ.ಸೆ.ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ.
ಕರಾವಳಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾ.20ರ ವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 3 ಡಿ.ಸೆ. ಹೆಚ್ಚಳವಾಗುವ ಸಾಧ್ಯತೆಗಳಿವೆ.
ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
ಶನಿವಾರ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಬೀದರ್ ಹಾಗೂ ಬೀದರ್‌ನ ನಿರ್ಣಾದಲ್ಲಿ ಅತೀ ಹೆಚ್ಚು 7 ಸೆಂ.ಮೀ ಮಳೆಯಾಗಿದೆ.
ಯಾದಗಿರಿಯ ಶಹಪುರದಲ್ಲಿ 6, ಬೀದರ್ ನಿಟ್ಟೂರಿನಲ್ಲಿ 5, ಬೀದರ್‌ನ ಮನ್ನಾಲಿ, ಮಂಠಾಳ, ಸಂತಪುರ, ಜನವಾಡ, ಹುಮನಾಬಾದ್, ಕಲಬುರಗಿಯ ಕಮಲಪುರದಲ್ಲಿ ತಲಾ 3 ಸೆಂ.ಮೀ, ಬೀದರ್‌ನ ಮುಡಬಿ, ಕೋಲಾರ, ಮಾಲೂರು, ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ, ಎಂಪ್ರಿಯಲ್ಲಿ ತಲಾ 2, ಬೀದರ್‌ನ ರಾಜೇಶ್ವರ್, ಹಲಬುರ್ಗಾ, ಕಲಬುರಗಿಯ ಮುಧೋಳೆ, ಅಡಕಿ, ವಿಜಯಪುರದ ತಾಳಿಕೋಟೆ, ಬೆಂಗಳೂರಿನ ಗೋಪಾಲನಗರ, ಉತ್ತರಹಳ್ಳಿ, ಬೆಂಗಳೂರು ಗ್ರಾಮಾಂತರದ ಹೊಸಕೋಟೆ, ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಮಂಗಳೂರಿನಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.