ರಾಜಧಾನಿ ಸೇರಿ ಹಲವೆಡೆ ಮತ್ತೆ ವರುಣನಬ್ಬರ
Team Udayavani, Sep 24, 2019, 3:05 AM IST
ಬೆಂಗಳೂರು/ಹುಬ್ಬಳ್ಳಿ: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸೋಮವಾರ ಬೆಳಿಗ್ಗೆಯಿಂದಲೇ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿತ್ತು.
ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಸೋಮ ವಾರ ಉತ್ತಮ ಮಳೆಯಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಉಕ್ಕಿ ಹರಿದು ಕೆಲ ಕಾಲ ಆತಂಕ ಸೃಷ್ಟಿಸಿದರೆ ಗಿರಿ ಶ್ರೇಣಿ ಪ್ರದೇಶದಲ್ಲೂ ಉತ್ತಮ ಮಳೆಯಾಗಿದೆ. ನರಸಿಂಹರಾಜಪುರದಲ್ಲೂ ಸೋಮವಾರ ಸಂಜೆ ವೇಳೆಗೆ ಭಾರೀ ಮಳೆ ಸುರಿದಿದೆ. ತರೀಕೆರೆ ತಾಲೂಕಿನ ವಿವಿಧೆಡೆ ಮಳೆಯಾಗಿದೆ.
ನೂರಾರು ಎಕರೆ ಹೊಲ ಜಲಾವೃತ: ಬಳ್ಳಾರಿ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಧಾರಾಕಾರ ಮಳೆ ಸುರಿದು ನೂರಾರು ಹೆಕ್ಟೇರ್ ಹೊಲಗಳೆಲ್ಲ ಜಲಾವೃತವಾಗಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ, ಮುಖ್ಯರಸ್ತೆ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿತ್ತು.
ಭಾರೀ ಮಳೆಯಿಂದ ಮೆಣಸಿನಕಾಯಿ ಹಾಗೂ ಹತ್ತಿ ಹೊಲಗಳಿಗೂ ನೀರು ನುಗ್ಗಿದ್ದು ಅಂದಾಜು 500 ಎಕರೆ ಪ್ರದೇಶ ವ್ಯಾಪ್ತಿಯ ಬೆಳೆ ನಷ್ಟವಾಗಿದೆ. ಗ್ರಾಮದ ಸರ್ಕಾರಿ ಶಾಲೆ ಆವರಣ ಹಾಗೂ ಕೊಠಡಿಯೊಳಗೂ ನೀರು ನುಗ್ಗಿದೆ. ಸೋಮವಾರ ಬೆಳಗಿನ ಜಾವ ಸುರಿದ ಧಾರಾಕಾರ ಮಳೆಗೆ ಎಂಟು ಎಕರೆಯಲ್ಲಿ ಬೆಳೆದ ಬೆಳೆ ಸಂಪೂರ್ಣ ಜಲಾವೃತ ಆಗಿದೆ. ಇದರಿಂದ ಅಪಾರ ಪ್ರಮಾಣದ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ರೈತ ಯರಿಸ್ವಾಮಿ ಹೇಳಿದರು.
ಉಕ್ಕಿಹರಿದ ದರ್ಪಣತೀರ್ಥ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ಸಂಜೆ ದಿಢೀರನೆ ಭಾರೀ ಮಳೆ ಸುರಿದಿದೆ. ಕ್ಷೇತ್ರದ ದರ್ಪಣ ತೀರ್ಥ ನದಿಯಲ್ಲಿ ಹಠಾತ್ತಾಗಿ ಪ್ರವಾಹ ಉಕ್ಕಿ ಹರಿದು ಸ್ವಲ್ಪ ಕಾಲ ಆತಂಕ ಸೃಷ್ಟಿಸಿತು. ಕುಮಾರಪರ್ವತದ ತಪ್ಪಲು ಪ್ರದೇಶ ಮತ್ತು ಸ್ಥಳೀಯವಾಗಿ ಸತತ ನಾಲ್ಕು ತಾಸು ಮಳೆ ಸುರಿಯಿತು. ದರ್ಪಣ ತೀರ್ಥ ತುಂಬಿ ಹರಿದ ಪರಿಣಾಮ ಆದಿಸುಬ್ರಹ್ಮಣ್ಯ ದೇಗುಲದ ಹೊರಾಂಗಣಕ್ಕೆ ನೀರು ನುಗ್ಗಿದೆ. ಆದಿ ದೇಗುಲದ ಅಶ್ವತ್ಥಕಟ್ಟೆ ಮುಳುಗಡೆ ಗೊಂಡಿತ್ತು. ದೇಗುಲದ ಆವರಣದೊಳಕ್ಕೆ ನೆರೆ ನೀರು ಹರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.