ಸಿಡಿಲು ಬಡಿದು ಒಟ್ಟು 6 ಸಾವು
Team Udayavani, Oct 16, 2018, 6:20 AM IST
ಬೆಂಗಳೂರು: ರಾಜ್ಯದ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ಮಳೆ ಸಂಬಂಧಿ ಅವಘಡದಲ್ಲಿ ಸಿಡಿಲು ಬಡಿದು 6 ಮಂದಿ ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬ್ಯಾಗವಾಟ್ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ನಾಗಪ್ಪ ನಾಯಕ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ನರೇಗಲ್ ಗ್ರಾಮದ ಕುಮಾರಪ್ಪ ಶಿವಬಸಪ್ಪ ಕೋತಿನ (50) ಹಾಗೂ ಸವಣೂರು ತಾಲೂಕು ಕುಣಿಮೆಳ್ಳಿಹಳ್ಳಿಯ ನಾಗರಾಜ ಸಣ್ಣ ತಮ್ಮಣ್ಣನವರ (22) ಹೊಲದಲ್ಲಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದರೆ, ಹಾವೇರಿಯ ಕುರುಬಗೊಂಡ ಗ್ರಾಮದ ಜಾಫರ್‌ಸಾಬ್ ಮಸೂತಿ ಎಂಬ ಬಾಲಕ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ.
ದಾವಣಗೆರೆಯಲ್ಲಿ ಸಿಡಿಲಿಗೆ ಮೂರು ಮಂದಿ ಬಲಿಯಾಗಿದ್ದಾರೆ.ಹರಪನಹಳ್ಳಿ ತಾಲೂಕಿನ ಚೆನ್ನಹಳ್ಳಿ ತಾಂಡಾದ ಹೊಲವೊಂದರಲ್ಲಿ ಸೌತೆಕಾಯಿ ಬಿಡಿಸಲು ತೆರಳಿದ್ದ ಲಲಿತಾಬಾಯಿ (28), ಹಾಗೂ ಶ್ವೇತಾ (11) ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಶಾಂತಮ್ಮ (50) ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಗೌಡಿಕಟ್ಟೆ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.
ಸೋಮವಾರ ಸಂಜೆ ಸುರಿದ ಮಳೆಯಿಂದ ರಕ್ಷಣೆ ಪಡೆಯಲು ಜಮೀನಿನಲ್ಲಿದ್ದ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರ ಜೊತೆಗಿದ್ದ ಐದಾರು ಮಂದಿ ಕೂಲಿಕಾರರು ಯಾವುದೇ ಅಪಾಯವಿಲ್ಲದೆ ಬಚಾವ್ ಆಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಹುಣಸೆಮರದ ಕೆಳಗೆ ನಿಂತಿದ್ದ ಎರಡು ಎತ್ತುಗಳು ಮೃತಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.