Hill Collapse ಭೀತಿ: ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ
Team Udayavani, Jul 18, 2024, 7:42 PM IST
ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಡಳಿತಕ್ಕೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಕೊಡಗು ಜಿಲ್ಲೆಯ ಮೂಲಕ ಮೈಸೂರು, ಬೆಂಗಳೂರು ಮೊದಲಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ – ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.