ಆ. 11 ವರೆಗೂ ಮಳೆಯಬ್ಬರ: 6 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

Team Udayavani, Aug 6, 2022, 9:10 PM IST

21rai

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿದು ಅವಾಂತರ ಸೃಷ್ಟಿಸಿರುವ ಮಧ್ಯೆಯೇ ಈ ತಿಂಗಳ 11ನೇ ತಾರೀಕಿನವರೆಗೂ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಭಾನುವಾರ ರೆಡ್‌ ಅಲರ್ಟ್‌ ನೀಡಿದ್ದು, 11ರ ವರೆಗೆ ಆರೆಂಜ್‌ ಅಲರ್ಟ್‌ ನೀಡಿದೆ. ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಭಾನುವಾರ ರೆಡ್‌ಅಲರ್ಟ್‌ ನೀಡಿದೆ. 11ರ ವರೆಗೆ ಆರೆಂಜ್‌ ಅಲರ್ಟ್‌ ನೀಡಿದೆ.

ಈ ಜಿಲ್ಲೆಗಳ ಜತೆಗೆ ಬೀದರ್‌, ಕಲಬುರಗಿ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಭಾನುವಾರ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ.

ಕಾಫಿನಾಡಲ್ಲಿ ಮಳೆ ಮುಂದುವರಿಕೆ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದಿದ್ದು, ಈ ಭಾಗದಲ್ಲಿ ಹರಿಯುವ ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟ ಸ್ವಲ್ಪಮಟ್ಟಿಗೆ ಏರಿಕೆಯಾಗಿದೆ.

ಜಿಲ್ಲಾದ್ಯಂತ ಮೂರ್‍ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದ್ದು, ಶೃಂಗೇರಿ ಸುತ್ತಮುತ್ತ ನಿರಂತರ ಮಳೆಯಾಗುತ್ತಿದೆ. ತುಂಗಾನದಿ ಹರಿವಿನಲ್ಲಿ ಏರಿಕೆಯಾಗಿದೆ. ಶುಕ್ರವಾರ ಕಪ್ಪೆಶಂಕರ ಮುಳುಗಿ ಬೈಪಾಸ್‌ ರಸ್ತೆವರೆಗೂ ನೀರುಬಂದಿತ್ತು. ಶನಿವಾರ ಸ್ವಲ್ಪಮಟ್ಟಿಗೆ ಮಳೆ ಕಡಿಮೆಯಾದ ಪರಿಣಾಮ ನದಿ ನೀರು ಇಳಿಕೆಯಾಗಿದೆ. ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಕಳಸ, ಹೊರನಾಡು, ಕುದುರೆಮುಖ ಭಾಗದಲ್ಲಿ ಮಳೆಯಾಗಿದ್ದು, ಭದ್ರಾ ನದಿ ನೀರಿನ ಮಟ್ಟ ಏರಿಕೆಯಾಗಿ ಹೊರನಾಡು ಕಳಸ ಸಂಪರ್ಕ ಕಲ್ಪಿಸುವ ಹೆಬ್ಟಾಳೆ ಸೇತುವೆ ಭದ್ರಾ ನದಿಯಲ್ಲಿ ಮುಳುಗಿದೆ. ಚಾರ್ಮಾಡಿಘಾಟಿ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರಂತರ ಮಳೆ ಆಗುತ್ತಿದೆ. ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಬಾಳೆಹೊನ್ನೂರು ಭಾಗದಲ್ಲೂ ಮಳೆ ಮುಂದುವರಿದಿದೆ.

ಮೂಡಿಗೆರೆ ತಾಲೂಕು ದೇವರಮನೆ, ಗುತ್ತಿ ಸುತ್ತಮುತ್ತ ಭಾರೀ ಮಳೆಯಾಗಿದೆ. ನಿರಂತರ ಮಳೆಗೆ ಹಳ್ಳಕೊಳ್ಳ ಕೆರೆಕಟ್ಟೆಗಳು ತುಂಬಿಕೊಂಡಿದೆ. ಕಳಸ ತಾಲೂಕು ನೆಲ್ಲಿಬೀಡು ಗ್ರಾಮದ ಮನೋಜ್‌ ಎಂಬುವರಿಗೆ ಸೇರಿದ ಗದ್ದೆಯಲ್ಲಿ ಭೂಕುಸಿತ ಉಂಟಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ನಿರಂತರ ಮಳೆಯಿಂದ ಅಡಿಕೆ, ಕಾಫಿ, ಕಾಳುಮೆಣಸು ಬೆಳೆಗೆ ಕೊಳೆರೋಗ ತಗುಲುವ ಆತಂಕ ರೈತರಲ್ಲಿ ಮೂಡಿಸಿದೆ.

ಟಾಪ್ ನ್ಯೂಸ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.