Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Team Udayavani, Apr 22, 2024, 7:09 PM IST
ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದ ತೋಟದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಶ್ರೀನಿವಾಸ ಗೊಲ್ಲರ್(16) ಸಿಡಿಲಿಗೆ ಬಲಿಯಾದ ದುರ್ದೈವಿ. ಕುರಿ ಮೇಯಿಸುತ್ತಿದ್ದ ವೇಳೆ ಮಳೆ ಬಂದಿದ್ದು ಈ ವೇಳೆ ಸಿಡಿಲಿನ ಹೊಡೆತಕ್ಕೆ ಬಾಲಕ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ಬಾಲಕನ ತಂದೆಯೂ ಗಾಯಗೊಂಡಿದ್ದಾರೆ. ಯಲಬುರ್ಗಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಿಡಿಲು ಬಡಿದು ಯುವಕ ಸಾವು
ಬೀದರ್ : ಜಿಲ್ಲೆಯ ನಿಟ್ಟೂರ್ (ಬಿ) ಗ್ರಾಮದಲ್ಲಿ ಸೋಮವಾರ ಸಾಯಂಕಾಲ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ವೇಳೆ ಸಿಡಿಲು ಬಡಿದು ಗ್ರಾಮದ ಸುನೀಲ್ ಕುಮಾರ (32) ಎಂಬ ಯುವಕ ಮೃತಪಟ್ಟಿದ್ದಾನೆ.
ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಸಿಡಿಲಬ್ಬರಕ್ಕೆ ತೀವ್ರಗೊಂಡು ಸ್ಥಳದಲ್ಲೇ ಜೀವ ಬಿಟ್ಟಿದ್ದಾನೆ. ಈ ವೇಳೆ ಆತನ ಸಹೋದರ ಮತ್ತು ಅಜ್ಜಿ ಸಹ ಇದ್ದು, ಅವರಿಬ್ಬರು ಪಾರಾಗಿದ್ದಾರೆ. ನಿಟ್ಟೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಡಿಲಿನ ಹೊಡೆತಕ್ಕೆ ತಾಲೂಕಿನ ಬಂಪಳ್ಳಿ ಗ್ರಾಮದಲ್ಲಿ ಮನೆ ಅಂಗಳದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಎಮ್ಮೆ ಕರು ಪ್ರಾಣ ಬಿಟ್ಟಿದೆ. ಗ್ರಾಮದ ಪ್ರಭು ಬಿರಾದಾರ ಅವರಿಗೆ ಸೇರಿದ ಕರು ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದೆ. ಬೀದರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾಯಂಕಾಲ ಗುಡುಗು, ಬಿರುಗಾಳಿ ಸಹಿತ ತುಂತುರು ಮಳೆಯಾಗಿದೆ. ಬೆಳಿಗ್ಗೆಯಿಂದ ಮಳೆಯ ಮುನ್ಸೂಚನೆ ನೀಡಿತ್ತು. ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.