ರಾಜ್ಯದಲ್ಲಿ ಮಳೆ ಇಳಿಮುಖ, ಆ.13ರಿಂದ ಬಿಡುವು ಸಾಧ್ಯತೆ
Team Udayavani, Aug 9, 2022, 9:21 PM IST
ಬೆಂಗಳೂರು: ರಾಜ್ಯಾದ್ಯಂತ ಸುಮಾರು 10 ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆ ಇಳಿಮುಖವಾಗುವ ಸೂಚನೆ ಕಾಣಿಸಿದೆ. ಆ.13ರಿಂದ ವರುಣನ ಅಬ್ಬರ ತಗ್ಗುವ ಸಾಧ್ಯತೆಯಿದೆ.
ಭಾರೀ ಮಳೆ ಸುರಿಯುತ್ತಿದ್ದ ಕರಾವಳಿಯಲ್ಲಿ ಬಿರುಸು ತಗ್ಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ.13ರ ವರೆಗೆ ಎಲ್ಲೋ ಅಲರ್ಟ್ ನೀಡಲಾಗಿದೆ.
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬುಧವಾರ ಆರೆಂಜ್ ಅಲರ್ಟ್ ನೀಡಿದ್ದು, ಆ.11 ಮತ್ತು 12ರಂದು ಎಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ:ಮಡಿಕೇರಿ – ಮಂಗಳೂರು ಹೆದ್ದಾರಿಯಲ್ಲಿ ಇಂದು ರಾತ್ರಿ ವಾಹನ ಸಂಚಾರ ಬಂದ್
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯಾವುದೇ ಅಲರ್ಟ್ ನೀಡದಿರುವುದರಿಂದ ಮಳೆ ಬಿಡುವು ನೀಡುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಪಾರ ಹಾನಿಗೈದ ವರುಣಾರ್ಭಟಕ್ಕೆ ಕೊಂಚ ಬಿಡುವು
ಬೆಂಗಳೂರು: ರಾಜ್ಯದ ಹಲವೆಡೆ ನಿರಂತರ ಸುರಿಯುತ್ತಿದ್ದ ಮಳೆ ಮಂಗಳವಾರ ಕೊಂಚ ಬಿಡುವು ನೀಡಿತ್ತು. ವ್ಯಾಪಕ ಮಳೆಯಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳವಾಗಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿ ತಾಲೂಕಿನ ನಾಲ್ಕು ಸೇತುವೆಗಳು ಮಂಗಳವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿತ್ತು.
ಈ ನಡುವೆ ಎಡಬಿಡದೆ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿ ರೈತ ಕಂಗೆಟ್ಟಿದ್ದಾನೆ. ಕಬಿನಿ ಜಲಾಶಯದಿಂದ ಹೊರಬಿಟ್ಟಿರುವ ಹೆಚ್ಚುವರಿ ನೀರಿನಿಂದಾಗಿ ಕಪಿಲಾ ನದಿ ಪಾತ್ರದ ಗ್ರಾಮಗಳು, ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಈಗಾಗಲೇ ಕಪಿಲಾ ನದಿ ಮೈದುಂಬಿ ಹರಿಯತೊಡಗಿದೆ. ಐತಿಹಾಸಿಕ ಹದಿನಾರು ಕಾಲು ಮಂಟಪ ಅರ್ಧಕ್ಕಿಂತ ಹೆಚ್ಚು ಮುಳುಗಿದ್ದು, ಪರಶುರಾಮ ದೇಗುಲದ ಸುತ್ತಲಿನ ಪ್ರದೇಶವನ್ನು ಕಪಿಲೆ ಸುತ್ತುವರಿಯತೊಡಗಿದೆ. ಇದರಿಂದ ಶ್ರಾವಣ ಮಾಸದ ಪೂಜೆ ನಿಷೇಧಿಸಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಚಿಕ್ಕಕೆರೆ ಕೋಡಿ ನೀರಿನಲ್ಲಿ ಅಪರಿಚಿತ ವ್ಯಕ್ತಿ ಕೊಚ್ಚಿಕೊಂಡು ಹೋಗಿದ್ದಾನೆ.
ಕಬಿನಿ ಡ್ಯಾಂನಿಂದ 43 ಸಾವಿರ
ಕ್ಯೂಸೆಕ್ ನೀರು ಹೊರಕ್ಕೆ
ಎಚ್.ಡಿ. ಕೋಟೆ: ಕೇರಳದ ವೈನಾಡಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ತಾಲೂಕಿನಲ್ಲಿರುವ ಕಬಿನಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಕಪಿಲಾ ನದಿಗೆ ಬಿಡಲಾಗುತ್ತಿರುವ ಹೆಚ್ಚುವರಿ ನೀರಿನ ಪ್ರಮಾಣ ಮತ್ತಷ್ಟು ಏರಿಸಲಾಗಿದೆ. ಜಲಾಶಯದ 4 ಕ್ರಸ್ಟ್‌ಗೇಟ್‌ಗಳ ಮೂಲಕ ಮಂಗಳವಾರ ಮಧ್ಯಾಹ್ನದಿಂದ 43 ಸಾವಿರ ಕ್ಯೂಸೆಕ್ ನೀರು ಕಪಿಲಾ ನದಿಗೆ ಹರಿಯಬಿಡಲಾಗಿದೆ. ಅಪಾರ ಪ್ರಮಾಣದ ನೀರು ಹೊರ ಬಿಟ್ಟಿರುವುದರಿಂದ ಜಲಾಶಯದ ಕ್ರಸ್ಟ್‌ಗೇಟ್ ತಳಭಾಗದ ಬಿದರಹಳ್ಳಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಬೀಚನಹಳ್ಳಿ, ಬಿದರಳ್ಳಿ, ಕೆಂಚನಹಳ್ಳಿ, ಎನ್.ಬೇಗೂರು, ಬೀರಂಬಳ್ಳಿ ಭಾಗದ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಮೂಡಲಗಿ: ನಾಲ್ಕು ಸೇತುವೆ
ಜಲಾವೃತ-ಸಂಚಾರ ಸ್ಥಗಿತ
ಮೂಡಲಗಿ: ಪಶ್ಚಿಮಘಟ್ಟ ಹಾಗೂ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿ ತಾಲೂಕಿನ ನಾಲ್ಕು ಸೇತುವೆಗಳು ಮಂಗಳವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಸೇರಿ ಘಟಪ್ರಭಾ ನದಿಗೆ ಒಟ್ಟು 17,000 ಕ್ಯೂಸೆಕ್ ನೀರು ಬರುತ್ತಿದೆ. ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ, ಸುಣಧೋಳಿ ಹಾಗೂ ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆ, ಕಮಲದಿನ್ನಿ ಹಾಗೂ ಹುಣಶ್ಯಾಳ ಪಿವೈಗೆ ಸಂಪರ್ಕ ಕಲ್ಪಿಸುವ ಕಮಲದಿನ್ನಿ ಸೇತುವೆಗಳು ಜಲಾವೃತಗೊಂಡಿದ್ದು ಸಂಚಾರ ಸ್ಥಗಿತಗೊಂಡು ಹಲವಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.