ಕರಾವಳಿ ಭಾಗದಲ್ಲಿ ಮಳೆ ಆರ್ಭಟ
Team Udayavani, Jul 16, 2017, 4:00 AM IST
ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಶನಿವಾರ ಕೂಡ ಮುಂದುವರಿದಿದ್ದು, ಇನ್ನೂ ಮೂರ್ನಾಲ್ಕು ದಿನಗಳು ಇದೇ ವಾತಾವರಣ ಇರಲಿದೆ. ಆದರೆ, ಒಳನಾಡು ಪ್ರದೇಶಗಳಲ್ಲಿ
ಮಾತ್ರ ಮಳೆಯ ಸುಳಿವಿಲ್ಲ. ಮುಂಗಾರು ಮಾರುತಗಳು ದುರ್ಬಲಗೊಂಡಿದ್ದರಿಂದ ಕೆಲ ದಿನಗಳಿಂದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಬಹುತೇಕ ಕಡಿಮೆಯಾಗಿದೆ. ಮಲೆನಾಡು ಸೇರಿ ಆಯ್ದ ಭಾಗಗಳಲ್ಲಿ ಮಾತ್ರ ಆಗಾಗ್ಗೆ ಮಳೆ ಕಾಣಿಸಿಕೊಳ್ಳುತ್ತಿದೆ.
ಮುಂದಿನ ಮೂರ್ನಾಲ್ಕು ದಿನಗಳು ಕೂಡ ಈ ಭಾಗದಲ್ಲಿ ಮಳೆ ಆಗುವ ನಿರೀಕ್ಷೆಗಳಿಲ್ಲ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ತಿಳಿಸಿದೆ. ಜುಲೈ 16ರಿಂದ 20ರವರೆಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದ್ದು, ಅದರಂತೆ ಒಳನಾಡು ಪ್ರದೇಶಗಳ ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ತುಂತುರು ಅಥವಾ ಚದುರಿದಂತೆ
ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಈ ನಡುವೆ ಶನಿವಾರ ಬೆಳಗ್ಗೆ 8.30ಕ್ಕೆ ಉಡುಪಿಯ ಕೋಟಾದಲ್ಲಿ 100 ಮಿ.ಮೀ., ತೀರ್ಥಹಳ್ಳಿಯ ಆಗುಂಬೆಯಲ್ಲಿ 90, ಕುಂದಾಪುರ ಮತ್ತು ಸಿದ್ದಾಪುರದಲ್ಲಿ 70 ಮಿ.ಮೀ. ಮಳೆ ದಾಖಲಾಗಿದೆ. ಕೊಡಗು, ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ 10ರಿಂದ 20 ಮಿ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.