ರಾಜ್ಯಸಭೆ ಚುನಾವಣೆ; ನಾಳೆ ಸಿದ್ದರಾಮಯ್ಯ ನವದೆಹಲಿಗೆ :ಹೈಕಮಾಂಡ್ ಜತೆ ಚರ್ಚೆ
ಭಗತ್‌ಸಿಂಗ್ ಅಧ್ಯಾಯ ತೆಗೆದಿದ್ದೂ ತಪ್ಪು, ಹೆಡಗೇವಾರ್ ಭಾಷಣ ಸೇರಿಸಿದ್ದೂ ತಪ್ಪು
Team Udayavani, May 20, 2022, 5:32 PM IST
ಕಲಬುರಗಿ: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರನ್ನು ಕಣಕ್ಕಿಳಿಸಬೇಕು ಹಾಗೂ ಹೆಚ್ಚುವರಿ ಮತ ಪಡೆಯುವ ನಿಟ್ಟಿನಲ್ಲಿ ಮತ್ತೊಬ್ಬ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಚರ್ಚಿಸಲು ಹೈಕಮಾಂಡ್ ಬುಲಾವ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಯಚೂರಿಗೆ ತೆರಳುವ ಮುನ್ನ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 21 ಶನಿವಾರ ತಾವು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಹದೆಹಲಿಗೆ ತೆರಳುತ್ತಿದ್ದೇವೆ. ಪ್ರಮುಖವಾಗಿ ಹೆಚ್ಚುವರಿ ಮತಗಳ ಚಲಾವಣೆಗೆ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆ ಅಥವಾ ಬೇರೆ ಏನು ಮಾಡಬಹುದು ಎಂಬ ಬಗ್ಗೆಯೂ ಚರ್ಚೆ ನಡೆಸಿ ನಿರ್ಧರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಎರಡೂ ತಪ್ಪು
ಪಠ್ಯದಿಂದ ಭಗತ್‌ಸಿಂಗ್ ಅಧ್ಯಾಯ ತೆಗೆದಿದ್ದು ಹಾಗೂ ಆರ್‌ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಭಾಷಣ ಸೇರ್ಪಡೆ ಮಾಡಿರುವುದು ಎರಡೂ ತಪ್ಪು ಎಂದು ಹೇಳಿರುವುದಕ್ಕೆ ಬಿಜೆಪಿಯವರು ತಮ್ಮನ್ನು ದೇಶದ್ರೋಹಿ ಎನ್ನುತ್ತಾರೆ. ಭಗತ್‌ಸಿಂಗ್ ಅವರಂಥ ಹುತಾತ್ಮರ ಪಠ್ಯ ಕೈಬಿಟ್ಟವರು ದೇಶದ್ರೋಹಿಗಳೋ, ಅದನ್ನು ಮರಳಿ ಹಾಕಿಸಿದವರು ದೇಶದ್ರೋಹಿಗಳೋ’ ಎಂಬುದನ್ನು ಅವರೇ ಹೇಳಲಿ ಎಂದರು.
ಹೆಡಗೇವಾರ್ ಆರ್‌ಎಸ್‌ಎಸ್ ಸ್ಥಾಪನೆ ಮಾಡಿದ್ದಕ್ಕೆ ಈಗ ಗೌರವ ಕೊಡುತ್ತಿದ್ದಾರೆ. ಇದೇ ಆರ್‌ಎಸ್‌ಎಸ್‌ನಲ್ಲಿ ನಾತುರಾಮ್ ಗೋಡ್ಸೆ ಅವರಂಥ ಅಪರಾಧಿಗಳು ಹುಟ್ಟಿಕೊಂಡರು. ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರನ್ನು ಬಿಟ್ಟು ಹೆಡಗೇವಾರ್ ಅವರನ್ನು ಮಕ್ಕಳಿಗೆ ಪರಿಚಯಿಸುವುದು ದೇಶದ್ರೋಹವೇ ಸರಿ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಹೆಡಗೇವಾರ್ ಯಾವತ್ತಾದರೂ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದೀರಾ? ದೇಶಕ್ಕಾಗಿ ಜೈಲಿಗೆ ಹೋಗಿದ್ದಾರಾ? ದೇಶಕ್ಕಾಗಿ ಜೀವವನ್ನೇ ತ್ಯಾಗ ಮಾಡಿದ ಭಗತ್‌ಸಿಂಗ್ ಬೇಕೋ, ಆರ್‌ಎಸ್‌ಎಸ್ ಕಟ್ಟಿದವರು ಬೇಕೋ? ಯಾರು ದೇಶದ್ರೋಹಿಗಳು ಎಂದು ಎಂದು ಜನ ನಿರ್ಧರಿಸುತ್ತಾರೆ. ಸಂವಿಧಾನದ ಆಶಯಗಳನ್ನು ಮಕ್ಕಳಿಗೆ ಕಲಿಸುವುದನ್ನು ಬಿಟ್ಟು ಆರ್‌ಎಸ್‌ಎಸ್ ಹುಳಗಳನ್ನು ಬಿಡಬೇಡಿ’ ಎಂದೂ ಅವರು ದೂರಿದರು.
ಸಿದ್ದರಾಮಯ್ಯ ಪರಿಶಿಷ್ಟರ ವಿರೋಧಿ ಎಂದು ಬಿಜೆಪಿಯವರು ಟ್ವೀಟ್ ಮಾಡುತ್ತಿದ್ದಾರೆ. ಇದು ರಾಜಕೀಯ ತಂತ್ರ. ಹಿಂದುಳಿದವರಿಗೆ, ಪರಿಶಿಷ್ಟರಿಗೆ ನಾನು ಮಾಡಿದಂಥ ಒಂದು ಕೆಲಸವನ್ನಾದರೂ ಬಿಜೆಪಿಯವರು ಮಾಡಿದ್ದಾರೆಯೇ? ಪರಿಶಿಷ್ಟ ಗುತ್ತಿಗೆದಾರರಿಗೂ ಮೀಸಲಾತಿ ನೀಡಿದ್ದು ತಾವು. ಎಸ್‌ಸಿಪಿ– ಟಿಎಸ್‌ಪಿ ಜಾರಿಗೆ ತಂದಿದ್ದು ಇದೇ ಸಿದ್ದರಾಮಯ್ಯ. ತಮ್ಮ ಅಧಿಕಾರದ ಐದು ವರ್ಷಗಳಲ್ಲಿ ₹ 88 ಸಾವಿರ ಕೋಟಿಯನ್ನು ಪರಿಶಿಷ್ಟರ ಕಲ್ಯಾಣಕ್ಕೆ ವಿನಿಯೋಗಿಸಿದ್ದೇನೆ. ಯಡಿಯೂರಪ್ಪ, ಜಗದೀಶ ಶೆಟ್ಟರ, ಬೊಮ್ಮಾಯಿ ಸೇರಿದಂತೆ ಬಿಜೆಪಿ ಎಲ್ಲ ಮುಖ್ಯಮಂತ್ರಿಗಳೂ ಸೇರಿಕೊಂಡು ಕೇವಲ 22 ಸಾವಿರ ಕೋಟಿ ವೆಚ್ಚ ಮಾಡಿದ್ದಾರೆ. ಈ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಲಿ. ನಿಜ ಬಣ್ಣ ಬಯಲಾಗುತ್ತದೆ’ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.
ಮುಂದಾಲೋಚನೆ ಇಲ್ಲದ ಸರ್ಕಾರ
‘ಮಳೆಯಿಂದಾಗಿ ಬೆಂಗಳೂರು ಅನುಭವಿಸುತ್ತಿರುವ ಬವಣೆಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ. ಮಳೆ ವಿಚಾರದಲ್ಲಿ ಮೂರುಕಾಸಿನ ಮುಂಜಾಗ್ರತೆಯೂ ಈ ಸರ್ಕಾರಕ್ಕೆ ಇಲ್ಲ. ಜನವರಿಯಲ್ಲಿ ಪೂರ್ವಸಿದ್ಧತೆ ಮಾಡಿಕೊಂಡು, ಸಮಸ್ಯೆಯಾಗದಂತೆ ಕ್ರಮ ವಹಿಸಬೇಕಿತ್ತು. ಈಗ ಮಳೆ ಶುರುವಾದ ಮೇಲೆ ಪರಿಹಾರ ಘೋಷಿಸುತ್ತಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ 1500 ಕೋಟಿ ಘೋಷಿಸಿದ್ದರು. ಒಂದು ಪೈಸೆ ಕೂಡ ಕೊಡಲಿಲ್ಲ. ಈಗ ಬೊಮ್ಮಾಯಿ ಅವರು ಮತ್ತೆ 1600 ಕೋಟಿ ಕೊಡುವುದಾಗಿ ಹೇಳಿದ್ದಾರೆ. ಇಂಥ ಭರವಸೆಗಳಿಂದ ಬೆಂಗಳೂರಿನ ಜನರ ಸಂಕಷ್ಟ ದೂರಾಗುವುದಿಲ್ಲ’ ಎಂದೂ ಕಿಡಿ ಕಾರಿದರು.
ಒತ್ತುವರಿಯಾದ ರಾಜಕಾಲುವೆಗಳನ್ನು ತೆರವು ಮಾಡುವುದೊಂದೇ ಇದಕ್ಕೆ ಪರಿಹಾರ. ತಾವು ಅಧಿಕಾರದಲ್ಲಿದ್ದಾಗ ಒತ್ತುವರಿ ತೆರವು ಕೆಲಸ ಶುರು ಮಾಡಿದೆ. ಆದರೆ, ನಂತರ ಬಂದವರು ಅದಕ್ಕೂ ಮಣ್ಣು ಮುಚ್ಚಿದರು. ಬೆಂಗಳೂರಿನ ಚಿತ್ರಣವನ್ನೇ ಬದಲಾಯಿಸುತ್ತೇನೆ’ ಎಂದು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಹೇಳಿಕೊಂಡಿದ್ದರು. ಅವರಿಂದ ಇನ್ನಷ್ಟು ಹಾಳಾಯಿತೇ ಹೊರತು ಸುಧಾರಣೆ ಆಗಲಿಲ್ಲ. ಎಚ್.ಡಿ. ಕುಮಾರಸ್ವಾಮಿ ತಮ್ಮ ಅವಧಿಯಲ್ಲಿ 110 ಹಳ್ಳಿಗಳನ್ನು ಸೇರ್ಪಡೆ ಮಾಡಿ ಬೆಂಗಳೂರು ವಿಸ್ತರಣೆ ಮಾಡಿದರು. ಆದರೆ, ಅಲ್ಲಿ ಕನಿಷ್ಠ ಮೂಲ ಸೌಕರ್ಯ ನೀಡಲಿಲ್ಲ. ಇದೇ ಕಾರಣಕ್ಕೆ ಇಂದು ಸಮಸ್ಯೆ ಎದುರಾಗಿದೆ’ ಎಂದು ಸಿದ್ದರಾಮಯ್ಯ ವಿವರಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.