ನೂತನ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ ; ಪ್ರಧಾನಿ ಮೋದಿ ಸಹಿತ ರಾಜಕೀಯ ನಾಯಕರ ಸಂತಾಪ
Team Udayavani, Sep 17, 2020, 11:37 PM IST
ಬೆಂಗಳೂರು: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರು ಇಂದು ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಅವರಿಗೆ 55 ವರ್ಷ ವಯಸ್ಸಾಗಿತ್ತು.
ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಗಸ್ತಿ ಅವರಲ್ಲಿ ತೀವ್ರ ಸ್ವರೂಪದ ಕೋವಿಡ್ 19 ಸೋಂಕು ಕಾಣಿಸಿಕೊಂಡಿದ್ದ ಕಾರಣ ಅವರನ್ನು ಸೆಪ್ಟಂಬರ್ 02ರಂದು ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಂಭೀರ ಸ್ಥಿತಿಯಲ್ಲಿದ್ದ ಗಸ್ತಿ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಮತ್ತು ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ತಜ್ಞ ವೈದ್ಯರ ನಿರಂತರ ನಿಗಾವಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಗಸ್ತಿ ಅವರು ಇಂದು ರಾತ್ರಿ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮೂಲತಃ ರಾಯಚೂರು ಜಿಲ್ಲೆಯ ಲಿಂಗಸೂಗೂರಿನವರಾದ ಗಸ್ತಿ, ಕಳೆದ ನಾಲ್ಕು ದಶಕಗಳಿಂದ ನಗರದಲ್ಲಿ ನೆಲೆಸಿದ್ದರು. ಮೂರು ದಶಕದಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಅವರು ತೋರಿದ್ದ ಪಕ್ಷ ನಿಷ್ಠೆ ಪರಿಗಣಿಸಿ ಈಚೆಗೆ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.
ಅಶೋಕ್ ಗಸ್ತಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದರೂ ರಾಜ್ಯಸಭಾ ಕಲಾಪದಲ್ಲಿ ಪಾಲ್ಗೊಳ್ಳದೆ ಚಿಕಿತ್ಸೆ ಪಡೆಯುತ್ತಿದ್ದರು.
ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಅಶೋಕ್ ಗಸ್ತಿ ಅವರು ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹೈಕಮಾಂಡ್ ಗಸ್ತಿ ಅವರನ್ನು ಇತ್ತೀಚೆಗಷ್ಟೇ ರಾಜ್ಯಸಭೆಗೆ ಆಯ್ಕೆ ಮಾಡಿತ್ತು. ಆದರೆ ಮೇಲ್ಮನೆ ಸಂಸದರಾಗಿ ಜನಸೇವೆಯನ್ನು ಮಾಡುವ ಅವಕಾಶವೇ ಗಸ್ತಿ ಅವರಿಗೆ ಲಭಿಸದೇ ಇರುವುದು ಅವರ ಅಭಿಮಾನಿಗಳನ್ನು ಮತ್ತು ಕುಟುಂಬ ಸದಸ್ಯರನ್ನು ತೀವ್ರ ಆಘಾತಕ್ಕೀಡುಮಾಡಿದೆ.
ಗಸ್ತಿ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿ.ಎಲ್. ಸಂತೋಷ್, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
Rajya Sabha MP Shri Ashok Gasti was a dedicated Karyakarta who worked hard to strengthen the Party in Karnataka. He was passionate about empowering the poor and marginalised sections of society. Anguished by his passing away. Condolences to his family and friends. Om Shanti.
— Narendra Modi (@narendramodi) September 17, 2020
Our prayers did not bear fruit . Though the first news turned to be false, finally fate had the last laugh. Sri Ashok Gasthi , 55 newly elected RS member passed away a few mnts ago due to #COVID19 infection. My thoughts with the family. Om Shanti ???
— B L Santhosh (@blsanthosh) September 17, 2020
ನಮ್ಮ ಪಾಲಿಗೆ ಇದು ಬಹುದೊಡ್ಡ
ಆಘಾತ. ಇತ್ತೀಚೆಗಷ್ಟೇ ರಾಜ್ಯಸಭಾ
ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರು ದೈವಾಧೀನರಾಗಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ. ಈ ಸಂಕಷ್ಟದ ಘಳಿಗೆಯಲ್ಲಿ ಅವರ ಕುಟುಂಬದೊಂದಿಗೆ ನಮ್ಮ ಪಕ್ಷ ಇರಲಿದೆ.— Nalinkumar Kateel (@nalinkateel) September 17, 2020
Deeply saddened to hear the news of the passing way of Rajya Sabha MP from Karnataka Shri. Ashok Gasti
My condolences to his family and friends. pic.twitter.com/EPrxwdRcRm
— DK Shivakumar (@DKShivakumar) September 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.