Rajya Sabha polls: ಎಸ್ಟಿಎಸ್, ಹೆಬ್ಬಾರ್ ವಿರುದ್ಧ ಶಿಸ್ತುಕ್ರಮ?
Team Udayavani, Feb 28, 2024, 1:15 AM IST
ಬೆಂಗಳೂರು: ಪಕ್ಷದ ವಿಪ್ ಉಲ್ಲಂಘಿಸಿದ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹೆಜ್ಜೆ ಇರಿಸಿದೆ.
ಈ ಬೆಳವಣಿಗೆಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಹಿರಿಯ ನಾಯಕರು ಸಭೆ ನಡೆಸಿದ್ದು, ಇಬ್ಬರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ವಿಪ್ ಉಲ್ಲಂ ಸಿರುವ ಬಗ್ಗೆ ಸ್ಪೀಕರ್ಗೆ ದೂರು ನೀಡಿ ಅನರ್ಹತೆಗೆ ಮನವಿ ಮಾಡಲು ನಿರ್ಧರಿಸಲಾಗಿದ್ದು, ವರಿಷ್ಠರ ನಿರ್ದೇಶನದ ಅನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಪಕ್ಷದ ನಾಯಕರು ಕಾನೂನು ತಜ್ಞರ ಜತೆ ಚರ್ಚೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಪಕ್ಷದ ರಾಜ್ಯ ನಾಯಕರು ವರಿಷ್ಠರಿಗೆ ದೂರು ನೀಡಿದ್ದು, ಇಬ್ಬರನ್ನು ಅಮಾನತುಗೊಳಿಸಬೇಕೇ, ಪಕ್ಷದಿಂದ ಉಚ್ಚಾಟಿಸಬೇಕೇ ಎಂಬ ಬಗ್ಗೆ ಚರ್ಚಿಸಿ ನಿರ್ಧರಿ ಸಲು ಮುಂದಾಗಿದ್ದಾರೆ.
ಒಂದು ವಾರದ ಮೊದಲೇ ಸೋಮಶೇಖರ್ ಸುಳಿವು
“ಅವಮಾನ ಆದ ಮೇಲೆ ಬಿಜೆಪಿಯಲ್ಲಿ ಇದ್ದು ಏನು ಮಾಡಲಿ’ ಎಂದು ಶಾಸಕ ಸೋಮಶೇಖರ್ ಅವರು ಫೆ. 21ರಂದು ಉದಯವಾಣಿಯ “ನೇರಾನೇರ’ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದಲ್ಲದೆ, ಜೆಡಿಎಸ್ ಜತೆಗಿನ ಮೈತ್ರಿಯನ್ನು ಒಪ್ಪುವುದಿಲ್ಲ ಎಂದಿದ್ದರು.
ಕಾಂಗ್ರೆಸ್ ಜತೆಗೆ ಬಹಿರಂಗವಾಗಿಯೇ ಸೋಮಶೇಖರ್ ಗುರುತಿಸಿಕೊಳ್ಳುತ್ತಿದ್ದರು. ಬಿಜೆಪಿಯ ಮೊದಲ ಅಭ್ಯರ್ಥಿಗೆ ಮತ ಹಾಕಬೇಕೆಂದು ಸೂಚಿಸಲಾಗಿತ್ತು. ಅಡ್ಡ ಮತದಾನ ಮಾಡಿರುವ ಅವರ ವಿರುದ್ಧ ಕಾನೂನಾತ್ಮಕ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಇದು ಆತ್ಮಸಾಕ್ಷಿಯಲ್ಲ, ರಾಜಕೀಯ ಆತ್ಮಹತ್ಯೆ.
-ಆರ್. ಅಶೋಕ್,
ವಿಧಾನಸಭೆ ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.