ರಾಜ್ಯಸಭೆ ಟಿಕೆಟ್: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ
Team Udayavani, Jun 6, 2020, 7:17 AM IST
ಬೆಳಗಾವಿ: ರಾಜ್ಯಸಭೆಗೆ ಯಾರಿಗೆ ಟಿಕೆಟ್ ಕೊಡಬೇಕು ಎಂಬುದರ ಬಗ್ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಇದು ವರಿಷ್ಠರಿಗೆ ಬಿಟ್ಟ ವಿಚಾರ. ಈ ವಿಷಯದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯಸಭೆ ಟಿಕೆಟ್‌ಗಾಗಿ ಪ್ರಭಾಕರ ಕೋರೆ ಮತ್ತು ರಮೇಶ ಕತ್ತಿ ಪೈಪೋಟಿ ನಡೆಸುತ್ತಿದ್ದಾರೆ.
ಎಲ್ಲರಿಗೂ ಆಕಾಂಕ್ಷೆ ಇರುತ್ತದೆ. ಆದರೆ ಇದರಲ್ಲಿ ಪಕ್ಷದ ವರಿಷ್ಠರ ನಿರ್ಧಾರ ಅಂತಿಮ. ಹಿರಿಯ ಶಾಸಕ ಉಮೇಶ ಕತ್ತಿ ಯಾವುದೇ ಬಂಡಾಯ ಮಾಡಿಲ್ಲ. ಶಾಸಕರಿಗೆ ಊಟ ಮಾಡಿಸಿದ್ದಾರೆ. ಲಾಕ್‌ಡೌನ್ ಇರುವುದರಿಂದ ಎಲ್ಲ ಹೋಟೆಲ್‌ಗಳು ಮುಚ್ಚಿದ್ದವು. ಈ ಕಾರಣದಿಂದ ಉಮೇಶ ಕತ್ತಿ ತಮ್ಮ ನಿವಾಸದಲ್ಲಿ ಶಾಸಕರಿಗೆ ಊಟದ ವ್ಯವಸ್ಥೆ ಮಾಡಿದ್ದರು. ಅದರಲ್ಲಿ ವಿಶೇಷ ಏನಿಲ್ಲ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು. ಸಿದ್ದರಾಮಯ್ಯ ಮಹಾನ್ ನಾಯಕರು. ಅವರ ಬಗ್ಗೆ ಗೌರವವಿದೆ. ಆದರೆ ಈಗ ಅವರ ಕಣ್ಣು ಹಳದಿಯಾಗಿದೆ.
ಬಿಜೆಪಿ ಶಾಸಕರು ಅವರ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು. ಈ ಮೊದಲು ಜಗದೀಶ ಶೆಟ್ಟರ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ನಾನೇ ಜಿಲ್ಲಾ ಉಸ್ತುವಾರಿ ಸಚಿವನಂತಿದ್ದೆ. ಈಗ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೇನೆ. ಇದರಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಜಿಲ್ಲೆಯ ಅಭಿವೃದಿಟಛಿ ದೃಷ್ಟಿಯಿಂದ ಯಾರೇ ಒಳ್ಳೆಯ ಸಲಹೆ ಅಥವಾ ಸೂಚನೆ ಕೊಟ್ಟರೆ ಅದನ್ನು ಸ್ವೀಕಾರ ಮಾಡ್ತೇನೆ, ಪûಾತೀತವಾಗಿ ಎಲ್ಲರನ್ನೂ ಕರೆದುಕೊಂಡು ಹೋಗ್ತೀನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.