ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಅಂತಿಮ
Team Udayavani, Oct 26, 2019, 3:00 AM IST
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡು- ನುಡಿಗೆ ಸೇವೆ ಸಲ್ಲಿಸಿರುವ ಗಣ್ಯರಿಗೆ ರಾಜ್ಯ ಸರ್ಕಾರ ನೀಡಲಿರುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಹುತೇಕ ಅಂತಿಮಗೊಳಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯ 17 ಜನರ ಆಯ್ಕೆ ಸಮಿತಿ ಶುಕ್ರವಾರ ಸಭೆ ಸೇರಿ 64 ಗಣ್ಯರಿಗೆ ರಾಜ್ಯೋತ್ಸವ ನೀಡುವ ಕುರಿತು ಚರ್ಚಿಸಿ ತೀರ್ಮಾನ ಕೈಗೊಂಡಿದೆ ಎಂದು ತಿಳಿದು ಬಂದಿದೆ.
ನ್ಯಾ. ನಾಗಮೋಹನ್‌ದಾಸ್ ಸಮಿತಿ ವರದಿ ಆಧಾರದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ವರ್ಷದಷ್ಟೇ ಸಂಖ್ಯೆಯ ಪ್ರಶಸ್ತಿ ನೀಡುವುದು ಹಾಗೂ 60 ವರ್ಷ ಮೀರಿದವರಿಗೆ ನೀಡಬೇಕೆಂಬ ನಿಯಮವನ್ನು ಗಮನದಲ್ಲಿಟ್ಟು ಕೊಂಡು ಪ್ರಶಸ್ತಿ ಪುರಸ್ಕೃತರ ಪಟ್ಟಿ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆಯುವಂತೆ ನೋಡಿಕೊಳ್ಳಬೇಕೆಂಬ ಸಲಹೆ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ ಒಬ್ಬರಿಗಾದರೂ ಯಾವುದಾದರೂ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅವುಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಅಧ್ಯಕ್ಷತೆಯ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿ ಪರಿಶೀಲಿಸಿ, ಅರ್ಹ 130 ಗಣ್ಯರ ಪಟ್ಟಿ ಸಿದ್ಧಪಡಿಸಿತ್ತು. ಈ ಪಟ್ಟಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಅಂತಿಮ ಪಟ್ಟಿ ಸಿದ್ಧಪಡಿಸಿದ್ದು, ಅಕ್ಟೋಬರ್ 30 ರಂದು ಅಧಿಕೃತವಾಗಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 1 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.