BJP-JDS ಪಾದಯಾತ್ರೆ ಹಿಂಪಡೆಯದಿದ್ದರೆ ರಕ್ತಕ್ರಾಂತಿ: ಕುರುಬರ ಸಂಘ ಎಚ್ಚರಿಕೆ
Team Udayavani, Jul 31, 2024, 11:15 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಹುದ್ದೆಯಲ್ಲಿ ಮುಂದುವರಿಯಬಾರದು ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರ ಮಾಡಿವೆ. ಯಾವುದೇ ಕಪ್ಪುಚುಕ್ಕೆ ಇಲ್ಲದೆ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ.
ಮುಡಾ ಅಕ್ರಮದ ವಿರುದ್ಧ ಬಿಜೆಪಿ-ಜೆಡಿಎಸ್ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯನ್ನು ಹಿಂಪಡೆಯದಿದ್ದರೆ ರಕ್ತಕ್ರಾಂತಿ ಆಗಬಹುದು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಎಚ್ಚರಿಕೆ ನೀಡಿದೆ.
ಸಂಘದ ಅಧ್ಯಕ್ಷ ಎಂ.ಈರಣ್ಣ ಹಾಗೂ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಸಮುದಾಯದ ನಾಯಕ ಸಿದ್ದರಾಮಯ್ಯ ಅವರು 40 ವರ್ಷಗಳ ಅವರ ಸುದೀರ್ಘ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲದ ಆಡಳಿತವನ್ನು ನಡೆಸಿದ್ದಾರೆ. ಅವರ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ವಿಪಕ್ಷಗಳ ವಿರುದ್ಧ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯಾದ್ಯಂತ ಸಿಡಿದೇಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿಂದೆಯೂ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜು ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರಂ ಸಿಂಗ್ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು ಎಂದು ಅವರು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.