ರಾಜ್ಯಾದ್ಯಂತ ನಾಳೆ ರಂಜಾನ್
Team Udayavani, May 24, 2020, 7:29 AM IST
ಬೆಂಗಳೂರು: ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯಾದ್ಯಂತ ಸೋಮವಾರ (ಮೇ 25) ಈದುಲ್ ಫಿತ್ರ(ಪವಿತ್ರ ರಂಜಾನ್ ಹಬ್ಬ) ಆಚರಿಸಲಾಗುವುದು ಎಂದು ಕೇಂದ್ರೀಯ ಚಂದ್ರದರ್ಶನ ಸಮಿತಿ ಪ್ರಕಟಿಸಿದೆ. ಈ ಕುರಿತು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಅಮೀರೆ ಷರಿಯತ್ ಹಾಗೂ ಕೇಂದ್ರೀಯ ಚಂದ್ರದರ್ಶನ ಸಮಿತಿಯ ಸಂಚಾಲಕ ಸಗೀರ್ ಅಹ್ಮದ್ ರಶಾದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸೌದಿ ಅರೇಬಿಯಾ ಹಾಗೂಕೇರಳದ ಚಂದ್ರಮಾನ ಅವಧಿ ಆಧರಿಸಿ ಭಾನುವಾರ ರಂಜಾನ್ ಹಬ್ಬ ಆಚರಣೆಗೆ ಅಲ್ಲಿನ ಖಾಝಿಗಳುತೀರ್ಮಾನಿಸಿದ್ದಾರೆ. ಎರಡು ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸೋಮವಾರ ರಂಜಾನ್ ಹಬ್ಬದ ಆಚರಣೆ ನಡೆಯಲಿದೆ ಎಂದು ಸಮಿತಿಯ ಸದಸ್ಯ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಸಮಿತಿಯ ಮನವಿ: ಕೊರೊನಾ ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ ಲಾಕ್‌ಡೌನ್ ಜಾರಿಯ ಲ್ಲಿದೆ. ಇಂತಹ ಸಂದರ್ಭದಲ್ಲಿ ಲಾಕ್‌ಡೌನ್ ನಿಯ ಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಸರಳ ರೀತಿಯಲ್ಲಿ ಹಬ್ಬ ಆಚರಿಸಬೇಕು. ಈದ್ಗಾ, ಮಸೀದಿಗಳಲ್ಲಿ ಹಬ್ಬದ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಹಬ್ಬದ ಶುಭಾಶಯಗಳನ್ನು ಕೋರುವ ವಿಚಾರದಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕೆಂದು ಸಮಿತಿ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.