Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Team Udayavani, Jul 27, 2024, 7:15 AM IST
ಬೆಂಗಳೂರು: ನಿರೀಕ್ಷೆಯಂತೆ ರಾಮನಗರ ಜಿಲ್ಲೆಯನ್ನು “ಬೆಂಗಳೂರು ದಕ್ಷಿಣ’ ಜಿಲ್ಲೆಯಾಗಿ ಮರು ನಾಮ ಕರಣಗೊಳಿಸುವ ಸಂಬಂಧದ ಪ್ರಸ್ತಾವ ನೆಗೆ ಶುಕ್ರ ವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಬೀಳಲಿದ್ದು, ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆ ಎದುರಿಸಲು ಕಾಂಗ್ರೆಸ್ ಮುನ್ನುಡಿ ಬರೆದಿದೆ.
ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ಸಚಿವ ಸಂಪುಟ ಅನುಮೋದಿಸಿದೆ.
ಅಲ್ಲಿನ ಜಿಲ್ಲೆಯ ಜನರು, ಶಾಸಕರು ಮತ್ತು ಕೆಲವು ಮಹತ್ವದ ವ್ಯಕ್ತಿಯ ಅಭಿಪ್ರಾಯದ ಮೇರೆಗೆ ಪ್ರಸ್ತಾವನೆ ಸಲ್ಲಿಕೆ ಯಾಗಿತ್ತು. ಇದರಿಂದ ರಾಮ ನಗರವೂ “ಬ್ರ್ಯಾಂಡ್ ಬೆಂಗಳೂರು’ ವ್ಯಾಪ್ತಿಗೆ ಬರಲಿದ್ದು, ಇದರಿಂದ ಅಲ್ಲಿನ ಭೂಮಿಗೆ ಭಾರಿ ಬೆಲೆ ಬರಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ಸಚಿವ ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಚುನಾವಣೆ ದೃಷ್ಟಿಯಿಂದ ಈ ಮರುನಾಮಕರಣ ಮಾಡಿಲ್ಲ. ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳಲಾಗಿದೆ. ರಾಮನಗರವು ಬೆಂಗಳೂರಿನ ಭಾಗವಾಗಿತ್ತು. ಆದರೆ ತುಮಕೂರು ಅಥವಾ ಮತ್ತೂಂದು ಊರಿಗೆ ಆ ಹಿನ್ನೆಲೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಎಚ್‌ಡಿಕೆ ಕ್ಷೇತ್ರಕ್ಕೆ ಕಾಲಿಡಲು ಬುನಾದಿ
ಪ್ರಸ್ತಾವನೆ ಸಲ್ಲಿಸಿದ ಕೇವಲ 15 ದಿನಗಳ ಅಂತರದಲ್ಲಿ ಸರಕಾರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ನೀಡಿದೆ. ಮೇಲ್ನೋಟಕ್ಕೆ ಮರು ನಾಮಕರಣದ ಮೂಲಕ “ಬ್ರ್ಯಾಂಡ್ ಬೆಂಗಳೂರು’ ಸ್ಪರ್ಶ ನೀಡುವ ಉದ್ದೇಶವಿದ್ದರೂ, ತಮ್ಮ ಬದ್ಧವೈರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ಬುನಾದಿ ಆಗಿದೆ ಎಂದೇ ವಿಶ್ಲೇಷಿಸಲಾಗಿದೆ.
ರಾಮನಗರ ಜಿಲ್ಲೆಯ ಜತೆಗೆ ಇರುವ ರಾಮನ ಹೆಸರು ತೆಗೆಯಲು ಆಗುವುದಿಲ್ಲ. ಒಂದು ವೇಳೆ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ.
– ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.