ರಮೇಶ್ ಭಾವನಾತ್ಮಕವಾಗಿ ಮಾತನಾಡಿದ್ದಾರೆ: ಶೆಟ್ಟರ್
Team Udayavani, Feb 24, 2020, 3:03 AM IST
ಮೈಸೂರು: ಶಾಸಕ ಮಹೇಶ್ ಕುಮಟಳ್ಳಿಗೆ ಅನ್ಯಾಯವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ್ ಜಾರಕಿಹೊಳಿ ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಭಾನುವಾರ ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಹೇಶ್ ಕುಮಟಳ್ಳಿಯವರನ್ನು ನಾನು ಕರೆದುಕೊಂಡು ಬಂದಿದ್ದೆ. ಅವರಿಗೆ ಸರಿಯಾದ ಸ್ಥಾನಮಾನ ನೀಡಬೇಕೆಂದು ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಅಷ್ಟೆ. ಈ ವಿಚಾರದಲ್ಲಿ ಭಾವನಾತ್ಮಕ ವಾಗಿ ಮಾತನಾಡಿದ್ದಾರೆ.
ಅದು ಕೇವಲ ಪಾಸಿಂಗ್ ರಿಮಾರ್ಕ್. ಹೀಗಾಗಿ ಅದನ್ನು ತೀರಾ ಗಂಭೀರವಾಗಿ ಪರಿಗಣಿಸುವುದು ಬೇಡ. ಸದ್ಯ ನಮ್ಮ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ, ಎಲ್ಲವೂ ಬಗೆಹರಿದಿದೆ. ಯಾವುದೇ ಭಿನ್ನಮತೀಯ ಶಾಸಕರು ಮನೆಗೆ ಬಂದಿಲ್ಲ. ಯಾವುದೇ ಸಭೆ, ಚರ್ಚೆ ಕೂಡ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.