ಅತೃಪ್ತರಿಗೆ ಮತ್ತೆ ಜಾರಕಿಹೊಳಿ ನೇತೃತ್ವ; ಬೆಲ್ಲದ್ ಸಾಥ್, ತಡರಾತ್ರಿ ಮೀಟಿಂಗ್!
Team Udayavani, Aug 7, 2021, 9:20 AM IST
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರ ನೇತೃತ್ವವನ್ನು ಮತ್ತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಹಿಸಿಕೊಂಡಿದ್ದಾರೆ.
ವಲಸಿಗ ಶಾಸಕರಾದ ಶ್ರೀಮಂತ ಪಾಟೀಲ, ಮಹೇಶ್‌ಕುಮಠಳ್ಳಿ, ವಿಧಾನ ಪರಿಷತ್ ಸದಸ್ಯರಾಜುಗೌಡ,ಅರವಿಂದ ಬೆಲ್ಲದ ಹಾಗೂ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ತಡ ರಾತ್ರಿ ಸಭೆ ನಡೆಸಿದ್ದಾರೆ. ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾಗಿರುವ ತಮ್ಮನ್ನು ಸಚಿವ ಸಂಪುಟದಿಂದ ಹೊರಗಿಟ್ಟು ತಮಗೆ ಅನ್ಯಾಯ ಮಾಡಲಾಗಿದೆ ಎಂದು ವಲಸೆ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಬಿಎಸ್‌ವೈ ಸಂಪುಟದಲ್ಲಿದ್ದ ಶ್ರೀಮಂತ ಪಾಟೀಲ್ ಹಾಗೂ ಆರ್. ಶಂಕರ್‌ಗೆ ಮತ್ತು ಮಹೇಶ್ ಕುಮಠಳ್ಳಿಗೆ ಸಚಿವ ಸ್ಥಾನ ನೀಡದೇ ಇರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗಿದೆ.
ರಾಜೀನಾಮೆ ಇಂಗಿತ: ಬಿಜೆಪಿ ನಾಯಕರು ನಡು ನೀರಿನಲ್ಲಿಕೈ ಬಿಟ್ಟಿದ್ದು, ನೀವೇ ನ್ಯಾಯ ಕೊಡಿಸಿ ಎಂದು ಜಾರಕಿಹೊಳಿ ಅವರನ್ನು ಶ್ರೀಮಂತ ಪಾಟೀಲ್, ಕುಮಠಳ್ಳಿ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ ಅಲ್ಲದೇ, ಈಗ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳಲ್ಲಿ ತಮಗೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿದ್ದಾರೆ ಎನ್ನಲಾಗಿದೆ. ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇದನ್ನೂ ಓದಿ:ನಿಗಮ ಅಧ್ಯಕ್ಷರಿಗೆ ಕೊಕ್? ಬಿಎಸ್‌ವೈ ಅವಧಿಯಲ್ಲಿ ನೇಮಕವಾದ ಅಧ್ಯಕ್ಷರಿಗೆ ಸಂಕಷ್ಟ
ಆರ್. ಶಂಕರ್ ಕೂಡ ಬಿಜೆಪಿ ನಾಯಕರ ನಡೆಯ ಬಗ್ಗೆ ಬೇಸರಗೊಂಡಿದ್ದಾರೆ ಎನ್ನಲಾಗಿದ್ದು, ತಮ್ಮಿಂದ ಬಿಜೆಪಿಗೆ ಅಧಿಕಾರ ಬಂದಿದ್ದರೂ, ತಮ್ಮನ್ನು ಲೆಕ್ಕಕ್ಕೆ ಇಟ್ಟುಕೊಳ್ಳದೇಇರುವುದು ಯಾವ ನ್ಯಾಯ? ಈ ಬಗ್ಗೆ ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಚರ್ಚಿಸುವಂತೆ ರಮೇಶ್ ಜಾರಕಿಹೊಳಿಗೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಸ್ಥಾನ ಸಿಗದೇ ವಂಚಿತರಾಗಿರುವ ಮೂಲ ಬಿಜೆಪಿ ಶಾಸಕರಾಗಿರುವ ಅರವಿಂದ ಬೆಲ್ಲದ ಹಾಗೂ ರಾಜು ಗೌಡ ಸಭೆಯಲ್ಲಿ ಪಾಲ್ಗೊಂಡು ಅಸಮಾಧಾನ ಹೊರ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬೆಳವಣಿಗೆಗಳ ಕುರಿತು ಶುಕ್ರವಾರ ಮತ್ತೂಂದು ಸಭೆ ನಡೆಸಿ ಚರ್ಚಿಸಲು ಅತೃಪ್ತರು ನಿರ್ಧರಿಸಿದ್ದರು ಎನ್ನಲಾಗಿದ್ದು, ಆದರೆ, ಶುಕ್ರವಾರ ಯಾವುದೇ ರೀತಿಯ ಸಭೆ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಬೊಮ್ಮಾಯಿ ಆಹ್ವಾನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅತೃಪ್ತ ಶಾಸಕರು ಸಭೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆಗಿರುವ ಅನ್ಯಾಯವನ್ನು ಸರಿಪಡಿಸುವ ಕುರಿತು ಚರ್ಚಿಸಿ ತೀರ್ಮಾನ ಮಾಡೋಣ ಎಂದು ಅತೃಪ್ತರಿಗೆ ಮಾತುಕತೆಗೆ ಆಹ್ವಾನ ನೀಡಿದ್ದರು ಎನ್ನಲಾಗಿದೆ. ಆದರೆ, ಮತ್ತೂಂದು ಬಾರಿ ಸಭೆ ಸೇರಿ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲು ಅತೃಪ್ತರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅದೇಕಾರಣಕ್ಕೆ ಶುಕ್ರವಾರ ಸಿಎಂರನ್ನು ಭೇಟಿ ಮಾಡದೇ ಅಂತರ ಕಾಯ್ದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸ್ಥಾನದ ವಿಚಾರವಾಗಿ ಈಗಾಗಲೇ ಚರ್ಚೆ ನಡೆದಿದೆ. ಮುಂದಿನ ಜೂನ್ ತಿಂಗಳವರೆಗೂ ಎಂಎಲ್ ಸಿ ಖಾಲಿ ಇಲ್ಲ. ಹಾಗಾಗಿ ಈಗ ಸಚಿವ ಸ್ಥಾನವನ್ನೂ ಕೇಳಲು ಸಾಧ್ಯವಿಲ್ಲ. ನಮ್ಮ ತ್ಯಾಗಕ್ಕೆ ಈಗ ಯಾವುದೇ ಬೆಲೆ ಇಲ್ಲ. ನಾವೆಲ್ಲರೂ ಸ್ನೇಹಿತರು, ಹಾಗಾಗಿ ಬಂದು ಭೇಟಿಯಾಗಿದ್ದೇವೆ.
-ಪ್ರತಾಪಗೌಡ ಪಾಟೀಲ್, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.