![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Jun 2, 2020, 1:33 PM IST
ಬೆಂಗಳೂರು: ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ರಮೇಶ್ ಜಾರಕಿಹೊಳಿಗೆ ಕೊನೆಗೂ ಬೆಳಗಾವಿ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿದೆ. ಇಂದರೊಂದಿಗೆ ಕೆ ಗೋಪಾಲಯ್ಯ ಅವರಿಗೆ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ.
ಈ ಹಿಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ರಮೇಶ್ ಜಾರಕಿಹೊಳಿ, ಕೆ. ಗೋಪಾಲಯ್ಯ ಮತ್ತು ಶ್ರೀಮಂತ ಪಾಟೀಲ್ ಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡಲಾಗಿರಲಿಲ್ಲ. ಸದ್ಯ ಜಾರಕಿಹೊಳಿ ಮತ್ತು ಕೆ ಗೋಪಾಲಯ್ಯಗೆ ಉಸ್ತುವಾರಿಗಿರಿ ನೀಡಿದ್ದು, ಶ್ರೀಮಂತ ಪಾಟೀಲ್ ಒಬ್ಬರು ಬಾಕಿ ಆದಂತಾಗಿದೆ.
ಈ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನೇ ಬೆಳಗಾವಿಯ ಉಸ್ತುವಾರಿಗೂ ನೇಮಿಸಲಾಗಿತ್ತು. ಬೆಳಗಾವಿ ಬಿಜೆಪಿಯಲ್ಲಿ ನಡೆಯುತ್ತಿರುವ ಮುಸುಕಿನ ಗುದ್ದಾಟದ ನಡುವೆಯೇ ರಮೇಶ್ ಜಾರಕಿಹೊಳಿಗೆ ಉಸ್ತುವಾರಿಗಿರಿ ನೀಡಿದ್ದು, ಹಲವು ರಾಜಕೀಯ ಲೆಕ್ಕಾಚಾರಗಳ ಆರಂಭಕ್ಕೆ ಕಾರಣವಾಗಿದೆ.
ಈ ಹಿಂದೆ ಹಾಸನ ಜಿಲ್ಲೆಯ ಉಸ್ತುವಾರಿಯನ್ನು ಜೆ ಮಾಧುಸ್ವಾಮಿಯವರಿಗೆ ನೀಡಲಾಗಿತ್ತು. ಮಾಧುಸ್ವಾಮಿಯವರು ತುಮಕೂರು ಜಿಲ್ಲೆಗೂ ಉಸ್ತುವಾರಿ ಸಚಿವರಾಗಿದ್ದಾರೆ. ಆಹಾರ ಮತ್ತು ನಾಗರಿಕ`ಸರಬರಾಜು ಸಚಿವ ಕೆ ಗೋಪಾಲಯ್ಯ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕದ ಹಿಂದೆ ಜಾತಿ ರಾಜಕೀಯ ಲೆಕ್ಕಾಚಾರವೂ ಇದೆ ಎಂಬ ಮಾತುಗಳು ವಿಧಾನಸೌಧದ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.
You seem to have an Ad Blocker on.
To continue reading, please turn it off or whitelist Udayavani.