Rameshwaram Cafe ಸ್ಫೋಟ ನಡೆಸಿದ್ದು ತೀರ್ಥಹಳ್ಳಿಯ ಮುಸ್ಸಾವಿರ್ ಹುಸೇನ್: NIA
ಆರೋಪಿಗಳ ಸ್ನೇಹಿತರು ಸೇರಿದಂತೆ ಎಲ್ಲ ಪರಿಚಯಸ್ಥರ ವಿಚಾರಣೆ
Team Udayavani, Apr 5, 2024, 7:09 PM IST
ಬೆಂಗಳೂರು: ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆ ಮುಂದುವರೆದಿದೆ. ಸ್ಫೋಟ ನಡೆಸಿದ ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸಹ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂದು ಎನ್ ಐಎ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ತನಿಖೆಯ ವೇಳೆ ಪ್ರಮುಖ ಆರೋಪಿಗಳಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡಿದ ಚಿಕ್ಕಮಗಳೂರಿನ ಕಳಸ ನಿವಾಸಿ ಮುಝಮ್ಮಿಲ್ ಶರೀಫ್ ಎಂಬಾತನನ್ನು ಮಾರ್ಚ್ 26ರಂದು ಬಂಧಿಸಲಾಗಿದ್ದು ಪೊಲೀಸ್ ಕಸ್ಟಡಿಯಲ್ಲಿಡಲಾಗಿದೆ.ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ, ಎನ್‌ಐಎ ತಂಡಗಳು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ನಡೆಸಿದೆ. 10 ಲಕ್ಷ ರೂಪಾಯಿಗಳ ಇನಾಮನ್ನೂ ಘೋಷಿಸಿದೆ.
ಪ್ರಕರಣದ ಸಾಕ್ಷ್ಯ ಮತ್ತು ಮಾಹಿತಿ ಸಂಗ್ರಹಿಸಲು ತಲೆಮರೆಸಿಕೊಂಡಿರುವ, ಬಂಧಿತ ಆರೋಪಿಗಳ ಕಾಲೇಜು ಮತ್ತು ಶಾಲಾ ಸಮಯದ ಸ್ನೇಹಿತರು ಸೇರಿದಂತೆ ಎಲ್ಲ ಪರಿಚಯಸ್ಥರನ್ನು ಕರೆಸಿ ವಿಚಾರಣೆ ನಡೆಸುತ್ತಿದೆ.
ಪ್ರಕರಣ ಭಯೋತ್ಪಾದಕ ಘಟನೆಯಾಗಿರುವುದರಿಂದ, ಸಾಕ್ಷಿಗಳ ಗುರುತಿನ ಯಾವುದೇ ಮಾಹಿತಿಯು ತನಿಖೆಗೆ ಅಡ್ಡಿಯಾಗಬಹುದು ಹೊರತಾಗಿ ಸಮನ್ಸ್ ಪಡೆದ ವ್ಯಕ್ತಿಗಳನ್ನು ಅಪಾಯಕ್ಕೆ ಒಳಪಡಿಸಬಹುದು. ಪರಿಶೀಲಿಸದ ಸುದ್ದಿಗಳು ಪ್ರಕರಣದ ಪರಿಣಾಮಕಾರಿ ತನಿಖೆಗೆ ಅಡ್ಡಿಯಾಗುತ್ತವೆ ಎಂದು ತನಿಖಾ ಸಂಸ್ಥೆ ಹೇಳಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಎಲ್ಲರ ಸಹಕಾರವನ್ನೂ ಎನ್‌ಐಎ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.