Rameshwaram Cafe; ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಪೋಟದ ಪ್ರಮುಖ ರೂವಾರಿಯ ಚಹರೆ
Team Udayavani, Mar 2, 2024, 9:21 AM IST
ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟದ ಹಿಂದಿನ ರೂವಾರಿಯ ಚಹರೆ ಸಿಸಿ ಟಿವಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಪೊಲೀಸರ ಪ್ರಕಾರ ಆರೋಪಿಯು ಬಾಂಬ್ ಇದ್ದ ಬ್ಯಾಗನ್ನು ಕೆಫೆಯೊಳಗೆ ಇಟ್ಟು ಬಾಂಬ್ ಸ್ಪೋಟವಾಗುವ ಮೊದಲು ಕೆಫೆಯಿಂದ ಹೊರ ನಡೆದಿದ್ದ.
ಶಂಕಿತನ ಜೊತೆಗೆ ಕಾಣಿಸಿಕೊಂಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಾಸ್ಕ್, ಕನ್ನಡಕ ಮತ್ತು ಕನ್ನಡಕ ಧರಿಸಿ ಮುಖ ಮುಚ್ಚಿಕೊಂಡಿದ್ದ ಪ್ರಮುಖ ಆರೋಪಿಯ ಚಲನವನಗಳು ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಆತ ಕೆಫೆಯಲ್ಲಿ ಇಡ್ಲಿ ಖರೀದಿಸಿದ್ದ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ಬಾಂಬ್ ಸ್ಪೋಟವಾಗಿದೆ. ಹತ್ತು ಸೆಕೆಂಡ್ ಗಳ ಅಂತರದಲ್ಲಿ ಎರಡು ಸ್ಪೋಟ ಸಂಭವಿಸಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ದಾಳಿಗೆ ಪ್ರತಿಕ್ರಿಯೆಯಾಗಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ಮತ್ತು ಸ್ಫೋಟಕ ವಸ್ತುಗಳ ಕಾಯಿದೆಯ ಕಠಿಣ ನಿಬಂಧನೆಗಳನ್ನು ಅನ್ವಯಿಸಿದ್ದಾರೆ.
ಸ್ಥಳಕ್ಕೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಘಟನೆಯನ್ನು ರಾಜಕೀಯಗೊಳಿಸದಂತೆ ಸಾರ್ವಜನಿಕರನ್ನು ಒತ್ತಾಯಿಸಿದರು ಮತ್ತು ನಡೆಯುತ್ತಿರುವ ತನಿಖೆಗೆ ಸಹಕರಿಸುವಂತೆ ಕರೆ ನೀಡಿದರು. “ಸುಧಾರಿತ ಸ್ಫೋಟಕ” ಸಾಧನದಿಂದ ಸ್ಫೋಟ ಸಂಭವಿಸಿರಬಹುದು ಎಂದು ಮುಖ್ಯಮಂತ್ರಿ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.