Rameswaram cafe: ರಾಜ್ಯದಲ್ಲಿ ಇನ್ನಷ್ಟು ಕಡೆ ಸ್ಫೋಟಕ್ಕೆ ಸಂಚು; ವಿಚಾರಣೆಯಲ್ಲಿ ಬಹಿರಂಗ

Team Udayavani, Apr 2, 2024, 9:08 AM IST

Rameswaram cafe: ರಾಜ್ಯದಲ್ಲಿ ಇನ್ನಷ್ಟು ಕಡೆ ಸ್ಫೋಟಕ್ಕೆ ಸಂಚು; ವಿಚಾರಣೆಯಲ್ಲಿ ಬಹಿರಂಗ

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿಕ್ಕಮಗಳೂರಿನ ಮುಜಾಮೀಲ್‌ ಷರೀಫ್, ಶಿವಮೊಗ್ಗದ ತೀರ್ಥಹಳ್ಳಿಯ ಅಬ್ದುಲ್‌ ಮತೀನ್‌ ತಾಹಾನ ಸೂಚನೆ ಮೇರೆಗೆ ಸಂಘಟನೆಯ ಇತರರ ಜತೆ ಸೇರಿಕೊಂಡು ರಾಜ್ಯದ ಕೆಲವೆಡೆ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ್ದ ಎಂಬುದು ಆತನ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ನಗರದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮುಜಾಮೀಲ್‌ ಷರೀಫ್ಗೆ ಬೆಂಗಳೂರಿನ ಹಲವು ಪ್ರತಿಷ್ಠಿತ ಪ್ರದೇಶಗಳು, ಹೋಟೆಲ್‌ ಹಾಗೂ ಇತರೆ ಪ್ರಮುಖ ಸ್ಥಳಗಳ ಬಗ್ಗೆ ಹೆಚ್ಚು ಪರಿಚಯವಿತ್ತು. ಸದ್ಯ ತಲೆಮರೆಸಿಕೊಂಡಿರುವ ಶಂಕಿತ ಮುಸಾವೀರ್‌ ಹುಸೇನ್‌ ಶಾಜೀಬ್‌ ಹಾಗೂ ಅಬ್ದುಲ್‌ ಮತೀನ್‌ ತಾಹಾ ಜತೆಗೂ ಚರ್ಚೆ ನಡೆಸುತ್ತಿದ್ದ. ಈ ಸಂದರ್ಭದಲ್ಲಿ ಯಾವೆಲ್ಲ ಸ್ಥಳದಲ್ಲಿ ಬಾಂಬ್‌ ಇರಿಸಬಹುದೆಂದು ಪರಸ್ಪರ ಮಾತನಾಡಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಆತನ ವಿಚಾರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತ್ತೂಂದೆಡೆ ಮುಜಾಮೀಲ್‌ ಷರೀಫ್ನ ಕಾರ್ಯವೈಖರಿ ಕಂಡು ಐಸಿಸ್‌ನ ದಕ್ಷಿಣ ಭಾರತದ ಕಮಾಂಡೋಗಳು ಈತನನ್ನು ಸಂಪರ್ಕಿಸಿದ್ದರು ಎಂಬುದು ಆತನ ಬಳಿ ಜಪ್ತಿ ಮಾಡಿದ ಮೊಬೈಲ್‌ಗ‌ಳಲ್ಲಿ ಪತ್ತೆಯಾಗಿದೆ. ಎಂಡ್‌ ಟು ಎಂಡ್‌ ಎನ್‌ಕ್ರಿಪ್ಟ್ ಮಾಡಿದ ಆ್ಯಪ್‌ಗ್ಳ ಮೂಲಕ ಸಂವಹನ ಮಾಡುತ್ತಿದ್ದರು ಎಂಬುದು ಪತ್ತೆಯಾಗಿದೆ. ಆದರೆ, ಶಂಕಿತ ಈ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಇನ್ನು ಸುಧಾರಿತ ಸ್ಫೋಟಕ ಸಾಧನ ತಯಾರಿಸುವಲ್ಲಿ ಪರಿಣಿತರಾಗಿರುವ ಅಬ್ದುಲ್‌ ಮತೀನ್‌ ತಾಹಾ ಮತ್ತು ಮುಸಾವೀರ್‌ ಹುಸೇನ್‌ ಶಾಜೀಬ್‌, ಶಿವಮೊಗ್ಗ ಪ್ರಾಯೋಗಿಕ ಸ್ಫೋಟ ಮತ್ತು ರಾಮೇಶ್ವರಂ ಕೆಫೆ ಸ್ಫೋಟದ ಬಾಂಬ್‌ಗಳನ್ನು ಮುಜಾಮೀಲ್‌ ಷರೀಫ್ ಸಮ್ಮುಖದಲ್ಲೇ ಸಿದ್ಧಪಡಿಸಿದ್ದರು. ಇನ್ನು ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಬಾಂಬ್‌ ಅನ್ನು ಮುಜಾಮೀಲ್‌ ಷರೀಫ್ ಸಮ್ಮುಖದಲ್ಲಿ ಮೊಹಮ್ಮದ್‌ ಶಾರೀಕ್‌ ತಯಾರಿಸಿದ್ದ ಎಂಬುದು ಗೊತ್ತಾಗಿದೆ. ಏಕೆಂದರೆ, ಈ ಮೂರು ಸ್ಫೋಟದಲ್ಲಿ ಪತ್ತೆಯಾದ ಅವಶೇಷಗಳಿಗೆ ಪರಸ್ಪರ ಸಾಮ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಶಂಕಿತ, ಒಂದೆರಡು ಬಾರಿ ಅಬ್ದುಲ್‌ ಮತೀನ್‌ ತಾಹಾನ ಭೇಟಿಯಾಗಿದ್ದೆ ಹೊರತು ಹೆಚ್ಚು ಬಾರಿ ಭೇಟಿ ಆಗಿಲ್ಲ ಎಂದು ಹೇಳುತ್ತಿದ್ದಾನೆ. ಆದರೆ, ಈತ ಹತ್ತಾರು ಬಾರಿ ಅಬ್ದುಲ್‌ ಮತೀನ್‌ ಮತ್ತು ಮುಸಾವೀರ್‌ ಹುಸೇನ್‌ ಶಾಜೀಬ್‌ ಭೇಟಿಯಾಗಿರುವ ಮಾಹಿತಿಗೆ ಪೂರಕ ಸಾಕ್ಷ್ಯಗಳು ಪತ್ತೆಯಾಗಿವೆ. ಹೀಗಾಗಿ ಶಂಕಿತನ ಮನೆ ಹಾಗೂ ತಲೆಮರೆಸಿಕೊಂಡಿರುವ ವ್ಯಕ್ತಿಗಳು ಭೇಟಿಯಾದ ಸ್ಥಳಕ್ಕೆ ಕರೆದೊಯ್ದು ಮಹಜರು ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.