ಪಡಿತರ ಅಕ್ರಮ: ವಾರಾಂತ್ಯದಲ್ಲಿ ತಪಾಸಣೆ
Team Udayavani, Mar 18, 2020, 3:04 AM IST
ವಿಧಾನ ಪರಿಷತ್: ಆಹಾರ ಇಲಾಖೆಯ ಪಡಿತರ ವಿತರಣಾ ವ್ಯವಸ್ಥೆಯ ಅಕ್ರಮ ಪತ್ತೆಗೆ ಪ್ರತಿ ವಾರಾಂತ್ಯ ಜಿಲ್ಲೆಗಳಿಗೆ ಭೇಟಿ ನೀಡಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ವಾರ ಭೇಟಿ ಸಾಧ್ಯವಾಗಿಲ್ಲ ಎಂದು ಆಹಾರ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಕಾಂಗ್ರೆಸ್ ಸದಸ್ಯ ಎನ್.ಎಸ್.ಬೋಸರಾಜು ಪ್ರಶ್ನೆಗೆ ಉತ್ತರಿಸಿ, ಪ್ರತಿ ವಾರಾಂತ್ಯದಲ್ಲಿ ಒಂದೊಂದು ಜಿಲ್ಲೆಗೆ ಭೇಟಿಕೊಟ್ಟು ತಪಾಸಣೆ ನಡೆಸುತ್ತಿದ್ದೇನೆ. ಕೊರೊನಾ ಹಿನ್ನೆಲೆ ಈ ವಾರ ಭೇಟಿ ನೀಡಲು ಸಾಧ್ಯವಾಗಿಲ್ಲ. ಅಕ್ರಮ ಪತ್ತೆ ಆದಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು. ಒಬ್ಬರಿಗೆ ನಾಲ್ಕೈದು ಪಡಿತರ ಚೀಟಿ ನೀಡಿದ ಆರೋಪವಿದೆ.
ಸಾಕಷ್ಟು ಕಡೆ ಈ ಸಮಸ್ಯೆ ಪತ್ತೆ ಮಾಡಿ ಕ್ರಮ ಕೈಗೊಂಡಿದ್ದೇವೆ. ಕರೊನಾ ಭೀತಿ ಹಿನ್ನೆಲೆಯಲ್ಲಿ ಬಯೊಮೆಟ್ರಿಕ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದೇವೆ. ಕಾರ್ಡ್ ಆಧಾರದ ಮೇಲೆ ಪಡಿತರ ವಿತರಿಸುವ ಕಾರ್ಯ ಮಾಡುತ್ತೇವೆ. ಜನ ಆತಂಕ ಪಡುವುದು ಬೇಡ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.