ration; ಅಕ್ಕಿಗೆ ನೀಡಲಾಗುತ್ತಿರುವ ಕಮಿಷನ್ ಏರಿಕೆ
Team Udayavani, Mar 1, 2024, 6:00 AM IST
ಬೆಂಗಳೂರು: ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ನೀಡಲಾಗುತ್ತಿರುವ ಕಮಿಷನ್ ಮೊತ್ತ
ವನ್ನು ಒಂದೂವರೆ ರೂಪಾಯಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅರಮನೆ ಮೈದಾನದಲ್ಲಿ ಗುರುವಾರ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಆಯೋಜಿಸಿದ್ದ ಅನ್ನಭಾಗ್ಯ ದಶಮಾನೋತ್ಸವ ಹಾಗೂ ರಾಜ್ಯ ಸರಕಾರಿ ಪಡಿತರ ವಿತರಕರ ಸಮಾವೇಶದಲ್ಲಿ ಅವರು ಮಾತನಾಡಿದರು.
ಈವರೆಗೆ ಪ್ರತಿ ಕೆಜಿಗೆ 1.24 ರೂ. ಕಮಿಷನ್ ಇತ್ತು. ಪಡಿತರ ವಿತರಕರ ಸಂಕಷ್ಟಗಳ ಅರಿವು ನನಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್.ಮುನಿಯಪ್ಪ ಕೂಡ ಕಮಿಷನ್ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇದೆಲ್ಲವನ್ನೂ ಪರಿಗಣಿಸಿ ಕಮಿಷನ್ ಅನ್ನು 1.50 ರೂ.ಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಿಸಿದರು.
ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ ನಾವು ಹಸಿವು ಮುಕ್ತ ಕರ್ನಾಟಕ ನಿರ್ಮಿಸಲು ಹೊರಟಿದ್ದೇವೆ. ನಾವು ರಾಜ್ಯದ ಬಡವರು, ದಲಿತರು, ಹಿಂದುಳಿದವರು, ಕಾರ್ಮಿಕರು ಮತ್ತು ರೈತರ ಪರವಾದ ನಿಲುವು ಮತ್ತು ಕಾರ್ಯಕ್ರಮ ಗಳನ್ನು ಹೊಂದಿದ್ದೇವೆ ಎಂದು ಸಿಎಂ ಹೇಳಿದರು.
ಆಹಾರ ಭದ್ರತಾ ಕಾಯ್ದೆಯನ್ನು ಬಿಜೆಪಿ ವಿರೋಧಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಅನ್ನಭಾಗ್ಯ ಯೋಜನೆ ಬಗ್ಗೆ ಕುಹಕದ ಮಾತುಗಳನ್ನು ಬಿಜೆಪಿ ನಾಯಕರು ಆಡಿದ್ದರು. ಅಂತಹ ಬಿಜೆಪಿ ಅಧಿಕಾರಕ್ಕೆ ಬಂದದ್ದು ದುರಂತ ಎಂದು ಹೇಳಿದರು.
ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಮನಮೋಹನ್ ಸಿಂಗ್ ಆಹಾರ ಭದ್ರತಾ ಹಕ್ಕಿನಡಿ ಅಕ್ಕಿ ಕೊಡುವ ಯೋಜನೆ ಪ್ರಕಟಿಸಿದರು. ಆಗ ನಾನು ಅವರ ಸಂಪುಟದಲ್ಲಿದ್ದೆ. ಈ ಯೋಜನೆಯನ್ನು ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದರು. ನಿಮ್ಮ ಹಸಿವನ್ನು ನೀಗಿಸಿದವರ ಜತೆಯಲ್ಲಿ ನಿಲ್ಲಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.