ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರತ್ನ ಪ್ರಭಾ ನೇಮಕ
Team Udayavani, Nov 28, 2017, 4:48 PM IST
ಬೆಂಗಳೂರು: ಇದೀಗ ರಾಜ್ಯದ ಪ್ರಮುಖ 2 ಹುದ್ದೆಗಳು ಮಹಿಳೆಯರ ಪಾಲಾಗಿದ್ದು, ಡಿಜಿ ಐಜಿಯಾಗಿ ನೀಲಮಣಿ ರಾಜು ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ರತ್ನ ಪ್ರಭಾ ಅವರನ್ನು ರಾಜ್ಯ ಸರ್ಕಾರ ಮಂಗಳವಾರ ನೇಮಕ ಮಾಡಿದೆ.
ರಾಜ್ಯ ಸರ್ಕಾರದ ಆಡಳಿತ ಮುಖ್ಯಸ್ಥರಾದ ಮುಖ್ಯ ಕಾರ್ಯದರ್ಶಿ ಸುಭಾಸ್ ಚಂದ್ರ ಕುಂಟಿಯಾ ನವೆಂಬರ್ 30ಕ್ಕೆ ನಿವೃತ್ತಿಯಾಗಲಿದ್ದು, ಆ ಹುದ್ದೆಗೆ 1981 ರ ಐಎಎಸ್ ಬ್ಯಾಚ್ ನ ರತ್ನ ಪ್ರಭಾ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ನೀಡಿದೆ. ಸಹಾಯಕ ಮುಖ್ಯ ಕಾರ್ಯದರ್ಶಿಯನ್ನಾಗಿ ವಿಜಯ್ ಭಾಸ್ಕರ್ ಅವರನ್ನು ನೇಮಕಗೊಳಿಸಲಾಗಿದೆ.
ರತ್ನಪ್ರಭಾ ಅವರ ಸೇವಾವಧಿ 4 ತಿಂಗಳು ಮಾತ್ರ ಉಳಿದಿದ್ದು, ಮಾರ್ಚ್ 13 ಕ್ಕೆ ನಿವೃತ್ತಿ ಹೊಂದಲಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿರುವ ಮತ್ತು ಮಹಿಳೆಯಾಗಿರುವ ಕಾರಣಕ್ಕೆ ಹೈದ್ರಾಬಾದ್ ಮೂಲದ ರತ್ನಪ್ರಭಾ ಅವರನ್ನೆ ಪರಿಗಣಿಸಲಾಗಿದೆ ಎನ್ನಾಲಾಗಿದೆ .
ಕೇಂದ್ರ ಸರ್ಕಾರದ ಸೇವೆಯಲ್ಲಿದ್ದ ಎಸ್.ಕೆ. ಪಟ್ಟನಾಯಕ್ ಅವರ ಹೆಸರೂ ಕೂಡ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.